ನವದೆಹಲಿ:- ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ಭೀಕರ ದಾಳಿ ಅಕ್ಷರಶಃ ಇಡೀ ದೇಶವನ್ನೇ ಮರುಗುವಂತೆ ಮಾಡಿದೆ. ಇನ್ನೂ ಉಗ್ರರ ದಾಳಿಯ ಹಿಂದೆ ಪಾಕಿಸ್ತಾನದ ಕೈವಾಡವಿದೆ ಎಂದು ಭಾರತ ಅನುಮಾನ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ಈ ಬಾರಿ ಭಾರತ ತಕ್ಕ ಉತ್ತರ ನೀಡಿದ್ದು,
ಬುಧವಾರ ನಡೆದ ಭದ್ರತಾ ಕುರಿತ ಸಂಪುಟ ಸಮಿತಿ ಸಭೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಸಮಿತಿ ಕೆಲವು ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ಪಹಲ್ಗಾಮ್ ಉಗ್ರರ ದಾಳಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ಬುಧವಾರ ಭದ್ರತೆ ಕುರಿತ ಸಂಪುಟ ಸಮಿತಿ ಸಭೆ ನಡೆದಿದೆ. ಈ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಇತರ ಹಿರಿಯ ಸಚಿವರು ಭಾಗವಹಿಸಿದ್ದರು.
ಸಭೆಯಲ್ಲಿ ಮೋದಿ ಸರ್ಕಾರ ತೆಗೆದುಕೊಂಡ ನಿರ್ಧಾರಗಳು:
– ಸಿಂಧೂ ಜಲ ಒಪ್ಪಂದ ಸ್ಥಗಿತಗೊಳಿಸಲಾಗುವುದು.
– ಅಟ್ಟಾರಿ-ವಾಘಾ ಗಡಿಯ ಚೆಕ್ ಪೋಸ್ಟ್ ಅನ್ನು ತಕ್ಷಣ ಮುಚ್ಚಲಾಗುವುದು.
– ಭಾರತಕ್ಕೆ ಪಾಕಿಸ್ತಾನಿ ಪ್ರಜೆಗಳಿಗೆ ಪ್ರವೇಶವಿಲ್ಲ, ಪಾಕಿಸ್ತಾನೀಯರಿಗೆ ವೀಸಾ ನೀಡುವುದಿಲ್ಲ. ಈಗಾಗಲೇ ಭಾರತಕ್ಕೆ ಬಂದಿರುವ ಯಾವುದೇ ಪಾಕಿಸ್ತಾನಿ ಪ್ರಜೆಗೆ ಭಾರತವನ್ನು ತೊರೆಯಲು 48 ಗಂಟೆಗಳ ಕಾಲಾವಕಾಶವಿದೆ.
– ಪಾಕಿಸ್ತಾನ ಹೈಕಮಿಷನ್ ಹೈಕಮಿಷನ್ ಬಲವನ್ನು 30ಕ್ಕೆ ಇಳಿಸಲಾಗಿದೆ.
– ನವದೆಹಲಿಯಲ್ಲಿರುವ ಪಾಕಿಸ್ತಾನಿ ಹೈಕಮಿಷನ್ನಲ್ಲಿರುವ ರಕ್ಷಣಾ, ಮಿಲಿಟರಿ, ನೌಕಾ ಮತ್ತು ವಾಯು ಸಲಹೆಗಾರರನ್ನು ಪರ್ಸನಾ ನಾನ್ ಗ್ರಾಟಾ ಎಂದು ಘೋಷಿಸಲಾಗಿದೆ. ಅವರು ಭಾರತವನ್ನು ಬಿಡಲು ಒಂದು ವಾರ ಸಮಯ ನೀಡಲಾಗಿದೆ.
– ಭಾರತವು ಇಸ್ಲಾಮಾಬಾದ್ನಲ್ಲಿರುವ ಭಾರತೀಯ ಹೈಕಮಿಷನ್ನ ರಕ್ಷಣಾ, ನೌಕಾಪಡೆ ಮತ್ತು ವಾಯು ಸಲಹೆಗಾರರನ್ನು ವಾಪಾಸ್ ಕರೆಸಿಕೊಳ್ಳಲಿದೆ. ಆಯಾ ಹೈಕಮಿಷನ್ಗಳಲ್ಲಿನ ಈ ಹುದ್ದೆಗಳನ್ನು ರದ್ದುಗೊಳಿಸಲಾಗಿದೆ.