Rohit Sharma: ಭರ್ಜರಿ ಬ್ಯಾಟಿಂಗ್: ಹಲವು ದಾಖಲೆ ಬರೆದ ಹಿಟ್ ಮ್ಯಾನ್!

0
Spread the love

ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಬುಧವಾರ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ವೇಳೆ ಮುಂಬೈ ಪರ ಕಣಕ್ಕಿಳಿದಿದ್ದ ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರು ಭರ್ಜರಿ ದಾಖಲೆ ಬರೆದಿದ್ದಾರೆ.

Advertisement

ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದು ಕೊಂಡಿದ್ದ ಪಾಂಡ್ಯ ಪಡೆ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು 20 ಓವರ್​ಗಳಲ್ಲಿ ಕೇವಲ 143 ರನ್ ಗಳಲ್ಲಿ ಕಟ್ಟಿ ಹಾಕುವಲ್ಲಿ ಯಶಸ್ವಿಯಾಯ್ತು.

ಸುಲಭ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡಕ್ಕೆ ರೋಹಿತ್ ಶರ್ಮಾ ಸ್ಪೋಟಕ ಆರಂಭ ಒದಗಿಸಿದ್ದರು. ಬಿರುಸಿನ ಬ್ಯಾಟಿಂಗ್​ನೊಂದಿಗೆ ಅಬ್ಬರಿಸಿದ ಹಿಟ್​ಮ್ಯಾನ್ 46 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 70 ರನ್ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ರೋಹಿತ್ ಶರ್ಮಾ ಟಿ20 ಕ್ರಿಕೆಟ್​ನಲ್ಲಿ ವಿಶೇಷ ಮೈಲುಗಲ್ಲು ದಾಟಿದ್ದಾರೆ.

ಎಸ್​ಆರ್​ಹೆಚ್ ವಿರುದ್ಧ ಬಾರಿಸಿದ 70 ರನ್​ಗಳೊಂದಿಗೆ ರೋಹಿತ್ ಶರ್ಮಾ ಟಿ20 ಕ್ರಿಕೆಟ್​ನಲ್ಲಿ 12 ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ ಬಳಿಕ ಈ ಸಾಧನೆ ಮಾಡಿದ 2ನೇ ಭಾರತೀಯ ಎನಿಸಿಕೊಂಡಿದ್ದಾರೆ. ಹಾಗೆಯೇ ಈ ದಾಖಲೆ ಬರೆದ ವಿಶ್ವದ 8ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಬಾರಿಸಿದ 3 ಸಿಕ್ಸರ್​ಗಳೊಂದಿಗೆ ಮುಂಬೈ ಇಂಡಿಯನ್ಸ್ ಪರ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲೂ ರೋಹಿತ್ ಶರ್ಮಾ ಅಗ್ರಸ್ಥಾನಕ್ಕೇರಿದ್ದಾರೆ.


Spread the love

LEAVE A REPLY

Please enter your comment!
Please enter your name here