ಪಹಲ್ಗಾಮ್ ದಾಳಿ: ಭದ್ರತಾ ಲೋಪ ಒಪ್ಪಿಕೊಂಡ ಕೇಂದ್ರ! ಸರ್ವಪಕ್ಷ ಸಭೆಯಲ್ಲಿ ಏನೆಲ್ಲಾ ಚರ್ಚೆ ಆಯ್ತು?

0
Spread the love

ನವದೆಹಲಿ:- ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ಭೀಕರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸರ್ವಪಕ್ಷ ಕರೆದು ಚರ್ಚೆ ನಡೆಸಿದೆ. ಸಭೆಯಲ್ಲಿ ಸರ್ಕಾರದ ಪರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಜೈಶಂಕರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗವಹಿಸಿದ್ದರೆ, ವಿಪಕ್ಷಗಳ ನಾಯಕರಲ್ಲಿ ಪ್ರಧಾನವಾಗಿ ಲೋಕಸಭೆಯ ವಿರೋಧ ಪಕ್ಷಗಳ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿಪಕ್ಷಗಳ ನಾಯಕ ಮಲ್ಲಿಕಾರ್ಜುನ ಖರ್ಗೆ, ಆಮ್ ಆದ್ಮಿ ಪಾರ್ಟಿಯ ಸಂಜಯ್ ಸಿಂಗ್, ತೃಣಮೂಲ ಕಾಂಗ್ರೆಸ್‌ನ ಸುದೀಪ್ ಬಂಡೋಪಾಧ್ಯಾಯ ಸೇರಿದಂತೆ ಹಲವಾರು ನಾಯಕರು ಭಾಗವಹಿಸಿದ್ದರು.

Advertisement

ಈ ಸಂದರ್ಭದಲ್ಲಿ ಸರ್ಕಾರವೂ ಸಹ ಭದ್ರತಾ ವೈಫಲ್ಯದಿಂದಲೇ ಪಹಲ್ಗಾಮ್ ಘಟನೆ ಆಗಿರುವುದಾಗಿ ಒಪ್ಪಿಕೊಂಡಿತು. ಸಭೆಯ ನಂತರ ಮಾತನಾಡಿದ ಕಿರಣ್ ರಿಜಿಜು, ಸಭೆಯಲ್ಲಿ ಭದ್ರತಾ ಲೋಪವಾಗಿರುವ ಬಗ್ಗೆ ವಿಪಕ್ಷಗಳು ಗಮನ ಸೆಳೆದವು. ಸರ್ಕಾರ ಕೂಡ ಅದನ್ನು ಒಪ್ಪುತ್ತದೆ. ಭವಿಷ್ಯದಲ್ಲಿ ಇಂಥ ಲೋಪಗಳು ಆಗದಂತೆ ಎಚ್ಚರಿಕೆ ವಹಿಸುವುದಾಗಿ ಸಭೆಯಲ್ಲಿ ವಿಪಕ್ಷಗಳ ನಾಯಕರಿಗೆ ನಾವು ಮನವರಿಕೆ ಮಾಡಿದೆವು ಎಂದರು.

ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದಿರುವ ಹತ್ಯಾಕಾಂಡವನ್ನು ಯಾರೂ ಮರೆಯುವ ಹಾಗಿಲ್ಲ. ಕಾಶ್ಮೀರದ ಇತಿಹಾಸದಲ್ಲಿ ಅದೊಂದು ಕಪ್ಪು ಚುಕ್ಕೆಯಾಗಲಿದೆ. ಉಗ್ರವಾದವನ್ನು ಬೇರು ಸಹಿತ ಕಿತ್ತು ಹಾಕಬೇಕಿದೆ. ಅದಕ್ಕಾಗಿ ಕೇಂದ್ರ ಸರ್ಕಾರ ಯಾವುದೇ ಕಠಿಣ ಕ್ರಮ ಕೈಗೊಳ್ಳಲೇಬೇಕು. ಈ ವಿಚಾರದಲ್ಲಿ ನಾವೆಲ್ಲರೂ ಪಕ್ಷಾತೀತವಾಗಿ ಕೇಂದ್ರಕ್ಕೆ ಬೆಂಬಲ ನೀಡುತ್ತೇವೆ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here