ಮಂಡ್ಯ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಆರ್ಟಿಕಲ್ 370 ರದ್ದತಿಯೇ ಕಾರಣ ಎಂದು ಶ್ರೀರಂಗಪಟ್ಟಣದ ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ಹೇಳಿದ್ದರು. ಇದರ ಬಗ್ಗೆ ಭಾರೀ ಟೀಕೆ ವ್ಯಕ್ತವಾದ ಬೆನ್ನಲ್ಲಿಯೇ ಶಾಸಕ ರಮೇಶ್ ಬಂಡಿಸಿದ್ದೇಗೌಡ ತಮ್ಮ ಹೇಳಿಕೆಗೆ ಕ್ಷಮೆ ಯಾಚಿಸಿದ್ದಾರೆ.
Advertisement
ದೇಶದ ಒಗ್ಗಟ್ಟಿಗೆ ಧಕ್ಕೆ ತರುವ ಹೇಳಿಕೆ ನೀಡಿದ್ದಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಬಂಡಿಸಿದ್ದೇಗೌಡ, ನಾನು ಹಾಗೆ ಹೇಳಬಾರದಿತ್ತು. ನನ್ನ ಮಾತಿನಿಂದ ಎಲ್ಲರಿಗೂ ನೋವಾಗಿದೆ.
ನಾನು ಎಲ್ಲರಲ್ಲೂ ಕ್ಷಮೆಯಾಚನೆ ಮಾಡುತ್ತೇನೆ. ಸರ್ಕಾರಗಳು ಭದ್ರತೆಯನ್ನು ಹೆಚ್ಚಿಸಬೇಕು. ನರಮೇದ ಮಾಡಿದವರ ವಿರುದ್ಧ ಪ್ರತೀಕಾರ ತೆಗೆದುಕೊಳ್ಳಬೇಕು. ಸಾವನ್ನಪ್ಪಿರುವವರ ಆತ್ಮಕ್ಕೆ ಶಾಂತಿ ದೊರಕಲಿ. ಅವರ ಕುಟುಂಬಕ್ಕೆ ದುಃಖ ಬರಿಸುವ ಶಕ್ತಿ ನೀಡಲಿ ಎಂದಿದ್ದಾರೆ.