ಬೆಂಗಳೂರು:– ಕರ್ನಾಟಕ ಸರ್ಕಾರದ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ.
ಸ್ಮಾರ್ಟ್ ಮೀಟರ್ ಅಳವಡಿಕೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠವು ಈ ಆದೇಶ ಹೊರಡಿಸಿದ್ದು, ಆಕ್ಷೇಪಣೆ ಸಲ್ಲಿಸಲು ಬೆಸ್ಕಾಂ ವಕೀಲರಿಗೆ ನೋಟಿಸ್ ಜಾರಿ ಮಾಡಿದೆ. ಅಲ್ಲದೇ ಅರ್ಜಿ ವಿಚಾರಣೆಯನ್ನು ಜೂ.4ಕ್ಕೆ ವಿಚಾರಣೆ ಮುಂದೂಡಿದರು.
ಸ್ಮಾರ್ಟ್ ಮೀಟರ್ ಕಡ್ಡಾಯ ಉಚಿತ ಭಾಗ್ಯಗಳನ್ನು ಕೊಟ್ಟಿರುವ ಪರಿಣಾಮಾನಾ? ನಿಮಗೆ ಉಚಿತ ವಿದ್ಯುತ್ ಕೇಳಿದವರು ಯಾರು? ಬಡವರು ಎಲ್ಲಿಗೆ ಹೋಗಬೇಕು ಎಂದು ಸರ್ಕಾರಿ ಪರ ವಕೀಲರನ್ನು ಜಡ್ಜ್ ತರಾಟೆಗೆ ತೆಗೆದುಕೊಂಡರು.



