ಬೆಂಗಳೂರು:– ಗದಗ, ಹಾವೇರಿ ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಈ ವಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದರೂ ಮಳೆಯ ಮುನ್ಸೂಚನೆ ನೀಡಿಲ್ಲ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.
ಬೆಂಗಳೂರಿನ ಎಚ್ಎಎಲ್ನಲ್ಲಿ34.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 35.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ. 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 41.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 35.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 36.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.