ಕಲಬುರ್ಗಿ:- ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜರುಗಿದೆ. ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.
32 ವರ್ಷದ ಮಹೇಶ್, 25 ವರ್ಷದ ಪ್ರೇಮ್ ಕುಮಾರ್ ಮತ್ತು 25 ವರ್ಷದ ಅನ್ನದಾನಯ್ಯ ಮೃತರು. ಮದುವೆ ಆಮಂತ್ರಣ ಪತ್ರಿಕೆ ಕೊಡಲು ಕಾರಿನಲ್ಲಿ ಸೇಡಂ ಕಡೆಯಿಂದ ಗುಂಡಗುರ್ತಿ ಕಡೆಗೆ ಹೊರಟಿರುವಾಗ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ನಿತ್ಯಾನಂದ ಎಂಬುವವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಸಂಬಂಧ ಮಳಖೇಡ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.



