ಬೆಂಗಳೂರು ಗ್ರಾಮಾಂತರ: ಗಾಂಜಾ ಸಪ್ಲೈ ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಜಯ್ ಅಲಿಯಾಸ್ ಬಾಂದ್ರಾ (22) ಬಂಧಿತ ಆರೋಪಿಯಾಗಿದ್ದು,
Advertisement
ಬಂಧಿತ ಆರೋಪಿ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದ ನಿವಾಸಿಯಾಗಿದ್ದಾನೆ. ಆಂಧ್ರಪ್ರದೇಶದಿಂದ ತಂದು ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದನು. ಇನ್ಸ್ಪೆಕ್ಟರ್ ಪ್ರಶಾಂತ್ ನಾಯಕ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿ ಬಂಧಿಸಿದ್ದಾರೆ.
ಇನ್ನೂ ಆರೋಪಿಯಿಂದ ಒಂದು ಲಕ್ಷ ಮೌಲ್ಯದ 1 ಕೆ.ಜಿ 710 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದ್ದು, ಘಟನೆ ಸಂಬಂಧ ದೇವನಹಳ್ಳಿ ತಾಲೂಕು ವಿಜಯಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.