Rain News: ಕರ್ನಾಟಕದ ಇಲ್ಲೆಲ್ಲಾ ಇಂದು ಜೋರು ಮಳೆ: ಎಲ್ಲೆಲ್ಲಿ?

0
Spread the love

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಜೋರು ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

Advertisement

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಹೆಚ್ಚು ಮಳೆಯಾಗಲಿದೆ. ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿಯಲ್ಲಿ ಸಾಧಾರಣ ಮಳೆಯಾಗಲಿದೆ.

ಎಚ್​ಎಎಲ್​ನಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 34.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಕಲಬುರಗಿಯಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here