ಇತಿಹಾಸದಲ್ಲೇ ಆಹ್ವಾನ ಇಲ್ಲದೇ ಪಾಕಿಸ್ತಾನಕ್ಕೆ ಹೋಗಿದ್ದು ಪ್ರಧಾನಿ ಮೋದಿ ಮಾತ್ರ: ರಣದೀಪ್ ಸಿಂಗ್ ಸುರ್ಜೇವಾಲ

0
Spread the love

ಬೆಳಗಾವಿ: ಇತಿಹಾಸದಲ್ಲೇ ಆಹ್ವಾನ ಇಲ್ಲದೇ ಪಾಕಿಸ್ತಾನಕ್ಕೆ ಹೋಗಿದ್ದು ಪ್ರಧಾನಿ ಮೋದಿ ಮಾತ್ರ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಪಾಕಿಸ್ತಾನ ಪ್ರೇಮವನ್ನು ರಾಜ್ಯ ಬಿಜೆಪಿ ನಾಯಕರಿಗೆ ನೆನಪಿಸಬೇಕಿದೆ.

Advertisement

ದೇಶದ ಇತಿಹಾಸದಲ್ಲೇ ಆಹ್ವಾನ ಇಲ್ಲದೇ ಪಾಕಿಸ್ತಾನಕ್ಕೆ ಹೋಗಿದ್ದು ಪ್ರಧಾನಿ ಮೋದಿ ಮಾತ್ರ. ಪಾಕ್‌ಗೆ ಹೋಗಿ ಮೋದಿ ಕೇಕ್ ಕತ್ತರಿಸಿ ಬಂದಾಗ ಪಠಾಣ್‌ಕೋಟ್ ದಾಳಿ ರಿಟರ್ನ್ ಗಿಫ್ಟ್ ಆಗಿ ಪಾಕಿಸ್ತಾನ ಕೊಟ್ಟಿತ್ತು. ಮೋದಿ ಪ್ರಧಾನಿ, ಅಮಿತ್ ಶಾ ಗೃಹಮಂತ್ರಿ ಇದ್ದಾಗ ಬಿಜೆಪಿ ಸರ್ಕಾರ ಪಠಾಣ್‌ಕೋಟ್ ದಾಳಿ ತನಿಖೆಗೆ ಐಎಸ್‌ಐಯನ್ನು ಭಾರತಕ್ಕೆ ಆಹ್ವಾನಿಸಿತ್ತು ಎಂದು ದೂರಿದ್ದಾರೆ.

ಹಲವು ಬಾರಿ ಬಿಜೆಪಿ ನಾಯಕರು ಹಾಗೂ ಐಎಸ್‌ಐಗೆ ಲಿಂಕ್ ಇದೆ‌‌. ಬಜರಂಗದಳದ ಬಲರಾಮ್ ಸಿಂಗ್ ಐಎಸ್ಐ ಪರ ಕೆಲಸ ಮಾಡುತ್ತಿದ್ದಾಗ ಸಿಕ್ಕಿಕೊಂಡಿದ್ದರು. ಡಿಆರ್‌ಡಿಒದಲ್ಲಿ ಕೆಲಸ ಮಾಡುತ್ತಿದ್ದ ಪ್ರದೀಪ್ ಐಎಸ್ಐ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದರು.

ಅವರಿಗೆ ಆರ್‌ಎಸ್‌ಎಸ್ ಜೊತೆ ಸಂಬಂಧ ಇತ್ತು ಇಲ್ವಾ..? ಜಮ್ಮು ಕಾಶ್ಮೀರದಲ್ಲಿ ಆಸೀಫಾರನ್ನು ಬೇಟಿ ಬಚಾವೋ ಬೇಟಿ ಪಡಾವೋ ಮುಖವಾಡ ಹಾಕಿದ್ದ ಬಿಜೆಪಿ, ಅದೇ ಆಸೀಫಾ ಪಾಕ್‌ನಲ್ಲಿ ಉಗ್ರನ ಜೊತೆ ಸೇರಿ ಭಾರತದ ವಿರುದ್ಧ ವಿಷಕಾರಿದ್ದಳು ಅಲ್ಲವೇ?” ಎಂದು ಸುರ್ಜೇವಾಲಾ ಪ್ರಶ್ನಿಸಿದರು.

 


Spread the love

LEAVE A REPLY

Please enter your comment!
Please enter your name here