ಗದುಗಿನ ಡಿ. ದೇವರಾಜ ಅರಸು ಭವನದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ರವಿ ಎಲ್.ಗುಂಜೀಕರ ಅವರ ನಿವೃತ್ತಿಯ ನಿಮಿತ್ತ ವನಮಹೋತ್ಸವ ಹಾಗೂ ಬಸವ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮಣಕವಾಡದ ಅಭಿನವ ಮೃತ್ಯುಂಜಯ ಮಹಾಸ್ವಾಮಿಗಳು 60 ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳ್ಳಾರಿ, ಅರಣ್ಯಾಧಿಕಾರಿ ಜಯರಾಮ, ಅರುಣಕುಮಾರ ಚವ್ಹಾಣ ಸೇರಿದಂತೆ ಗುಂಜೀಕರ ಅವರ ಅಭಿಮಾನಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
Advertisement