HomeKarnataka Newsಜಾತಿಗಣತಿಗೆ ಮುಂದಾದ ಕೇಂದ್ರ ಸರ್ಕಾರ: ಕರ್ನಾಟಕ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಜಾತಿಗಣತಿಗೆ ಮುಂದಾದ ಕೇಂದ್ರ ಸರ್ಕಾರ: ಕರ್ನಾಟಕ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

For Dai;y Updates Join Our whatsapp Group

Spread the love

ಬಾಗಲಕೋಟೆ:- ಜಾತಿಗಣತಿಗೆ ಮುಂದಾಗಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಸ್ವಾಗತಿಸಿದ್ದಾರೆ.

ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿದ್ದರಾಮಯ್ಯ, ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಕರ್ನಾಟಕದಲ್ಲಿ ನಾವು ಕೇವಲ ಜಾತಿ ಗಣತಿ ನಡೆಸದೇ ಅದರ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಯನ್ನು ನಡೆಸಿದ್ದೇವೆ. ಈ ದತ್ತಾಂಶಗಳ ಆಧಾರದಲ್ಲಿ ಈಗಿನ ಮೀಸಲಾತಿ ನೀತಿಯನ್ನು ಪರಿಷ್ಕರಿಸಿ ಅದರ ಮಿತಿಯನ್ನು ಹೆಚ್ಚಿಸುವ ಪ್ರಯತ್ನ ಕೂಡಾ ನಡೆದಿದೆ. ಜಾತಿ ಗಣತಿಯ ಜೊತೆಯಲ್ಲಿ ಈ ಪ್ರಕ್ರಿಯೆಯನ್ನು ಕೂಡಾ ಕೇಂದ್ರ ಸರ್ಕಾರ ಪೂರ್ಣಗೊಳಿಸಲಿದೆ ಎಂದು ನಂಬಿದ್ದೇನೆ ಎಂದರು.

ವೈಜ್ಞಾನಿಕವಾದ ಮೀಸಲಾತಿ ನೀತಿಯನ್ನು ರೂಪಿಸುವುದೇ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮೂಲ ಉದ್ದೇಶವಾಗಿದೆ. ಪ್ರತಿ ಬಾರಿ ಮೀಸಲಾತಿಗೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಗೆ ಬಂದಾಗೆಲ್ಲ ಸುಪ್ರೀಂಕೋರ್ಟ್ ಇಂತಹದ್ದೊಂದು ಸಮೀಕ್ಷೆ ನಡೆಸುವ ಅಗತ್ಯವನ್ನು ಒತ್ತಿ ಒತ್ತಿ ಹೇಳುತ್ತಾ ಬಂದಿದೆ ಎನ್ನುವುದನ್ನು ಕೇಂದ್ರ ಸರ್ಕಾರ ಗಮನಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ಜಾತಿ ಗಣತಿ ಜೊತೆಯಲ್ಲಿ ಮೀಸಲಾತಿ ಮಿತಿ ಏರಿಕೆಯ ನಿರ್ಧಾರವನ್ನು ಸಂಪೂರ್ಣ ಬೆಂಬಲಿಸಿ ಅದನ್ನು ನಮ್ಮ ಪಕ್ಷದ ರಾಷ್ಟ್ರೀಯ ಕಾರ್ಯಕ್ರಮವನ್ನಾಗಿ ರೂಪಿಸಿ ದೇಶಾದ್ಯಂತ ಪ್ರಚಾರ ಮಾಡುತ್ತಾ ಬಂದ ಕಾಂಗ್ರೆಸ್ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರನ್ನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ. ಅವರ ಅವಿರತ ಪ್ರಯತ್ನದ ಒತ್ತಡದಿಂದಾಗಿಯೇ ಇಂದು ಪ್ರಧಾನಿ ನರೇಂದ್ರ ಮೋದಿಯವರು ಜಾತಿ ಗಣತಿ ನಡೆಸುವ ನಿರ್ಧಾರವನ್ನು ಕೈಗೊಂಡಿದ್ದಾರೆ ಎನ್ನುವುದನ್ನು ಅವರು ಒಪ್ಪಿಕೊಳ್ಳದೇ ಇರಬಹುದು, ಆದರೆ ದೇಶ ಖಂಡಿತಾ ಒಪ್ಪುತ್ತದೆ ಎಂದು ಹೇಳಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!