HomeGadag Newsರಾಜ್ಯದ ಪ್ರಗತಿಗೆ ಬಸವಣ್ಣನವರ ಕೊಡುಗೆ ಅಪಾರ

ರಾಜ್ಯದ ಪ್ರಗತಿಗೆ ಬಸವಣ್ಣನವರ ಕೊಡುಗೆ ಅಪಾರ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಧಾರವಾಡ: 12ನೇ ಶತಮಾನದ ಬಸವಣ್ಣನವರ ವಿಚಾರಧಾರೆಗಳು, ಸಾಮಾಜಿಕ ಸುಧಾರಣೆಗಳು ಅವರ ಅನುಭವ ಮಂಟಪ, ವಚನಗಳ ಮೂಲಕ ಜಾರಿಗೆ ಬಂದರೆ, ಬಸವಣ್ಣನವರ ಮಹಾನ್ ತತ್ವಗಳನ್ನು ಅನುಸರಿಸುವಂತೆ ಡಾ. ಬಾಬಾಸಾಹೇಬ ಅಂಬೇಡ್ಕರರು ಭಾರತಕ್ಕೆ ಸಂವಿಧಾನ ನೀಡಿದ್ದಾರೆ. ಸಮಾನತೆ, ಸ್ತ್ರೀ ಸ್ವಾತಂತ್ರ‍್ಯ, ಲಿಂಗ ಸಮಾನತೆಯಂತಹ ಕ್ರಾಂತಿಕಾರ ವಿಚಾರಗಳನ್ನು ಅವಲೋಕಿಸಿದಾಗ ಇಬ್ಬರು ಮಹಾತ್ಮರಲ್ಲಿ ಸಾಮ್ಯತೆ ಕಾಣುತ್ತದೆ ಎಂದು ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಹೇಳಿದರು.

ಅವರು ಬುಧವಾರ ಸಂಜೆ ನಗರದ ಆಲೂರು ವೆಂಕಟರಾವ್ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತವಾಗಿ ಆಯೋಜಿಸಿದ್ದ ಕರ್ನಾಟಕ ಸಾಂಸ್ಕೃತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬಸವಣ್ಣನವರು ಸಮಾನತೆ, ಲಿಂಗ ಸಮಾನತೆ, ಮಹಿಳಾ ಸ್ವಾತಂತ್ರ‍್ಯ ಸೇರಿದಂತೆ ಅನೇಕ ಸಾಮಾಜಿಕ ಸುಧಾರಣೆಗಳನ್ನು ಪ್ರತಿಪಾದಿಸಿದ್ದರು. ಡಾ. ಅಂಬೇಡ್ಕರ್ ಅವರು ಈ ಎಲ್ಲ ಅಂಶಗಳನ್ನು ಸಂವಿಧಾನದಲ್ಲಿ ಸೇರಿಸಿದ್ದಾರೆ. ಆದ್ದರಿಂದ ಇಬ್ಬರ ವಿಚಾರಗಳಲ್ಲೂ ಸಾಮ್ಯತೆ ಇದೆ ಎಂದು ಅವರು ಅಭಿಪ್ರಾಯಪಟ್ಟರು.

ಬಸವಣ್ಣನವರ ನಡೆ-ನುಡಿಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಬಸವಣ್ಣನವರ ಬೋಧನೆಗಳನ್ನು ಸಮಕಾಲೀನ ಸಂಗತಿಗಳೊಂದಿಗೆ ಹೋಲಿಕೆ ಮಾಡಿ ವಿಶ್ಲೇಷಿಸಿ, ಅವರ ವಿಚಾರಗಳನ್ನು ಮನೆಮನೆಗೆ ಮುಟ್ಟಿಸುವ ಕೆಲಸವಾಗಬೇಕು ಎಂದು ಸಚಿವ ಸಂತೋಷ ಲಾಡ್ ಹೇಳಿದರು.

ಮಾಜಿ ಶಾಸಕ, ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಮಾತನಾಡಿ, ಬಸವಣ್ಣನವರ ಬದುಕು ನಮಗೆಲ್ಲ ಮಾದರಿಯಾಗಿದೆ. ಅವರ ಜೀವನ ಸಂದೇಶ ನಮಗೆ ದಾರಿದೀಪವಾಗಬೇಕು ಎಂದರು.

ಡಾ. ಎಂ.ಎಂ. ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಪ್ರೊ. ವೀರಣ್ಣ ರಾಜೂರ ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿದರು.

ಧಾರವಾಡ ಸರಕಾರಿ ಪ್ರಥಮದರ್ಜೆ ಕಾಲೇಜಿನ ಕನ್ನಡ ಸಹ ಪ್ರಾಧ್ಯಾಪಕ ಡಾ. ಗಿರೀಶ ದೇಸೂರ ಬಸವೇಶ್ವರರ ಕುರಿತು ವಿಶೇಷ ಉಪನ್ಯಾಸ ನೀಡಿದರು. ವೇದಿಕೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ, ಧಾರವಾಡ ರಂಗಾಯಣ ನಿರ್ದೇಶಕ ರಾಜು ತಾಳಿಕೋಟಿ, ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿ.ಪಂ ಉಪಕಾರ್ಯದರ್ಶಿ ಬಿ.ಎಸ್. ಮೂಗನೂರಮಠ, ಧಾರವಾಡ ತಹಸೀಲ್ದಾರ ಡಿ.ಎಚ್. ಹೂಗಾರ, ಸಮಾಜದ ಮುಖಂಡರಾದ ಸಿದ್ರಾಮಣ್ಣ ನಡಕಟ್ಟಿ, ಎನ್.ಬಿ. ಗೊಲ್ಲನ್ನವರ ಇದ್ದರು.

ಸಂಗೀತ ವಿದ್ವಾಂಸ ಡಾ. ಕೈವಲ್ಯಕುಮಾರ ಗುರುವ ಸುಮುಧರ ವಚನ ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು. ರವಿ ಕುಲಕರ್ಣಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಬಸವ ಅನುಯಾಯಿಗಳು, ಅಭಿಮಾನಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

ಬಸವಣ್ಣನವರು ವಚನಗಳ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸಿದರು. ಅನುಭವ ಮಂಟಪದ ಮೂಲಕ ಸಮಾಜದಲ್ಲಿ ಸಮಾನತೆ ತರಲು ಪ್ರಯತ್ನಿಸಿದರು. ಕರ್ನಾಟಕದ ಇಂದಿನ ಪ್ರಗತಿ, ಅಭಿವೃದ್ಧಿಗೆ ಬಸವಣ್ಣನವರ ಕೊಡುಗೆ ಅಧಿಕವಾಗಿದೆ. ಕನ್ನಡ ನಾಡಿನ ಇತಿಹಾಸವನ್ನು ನಾವು ಅವಲೋಕಿಸಿದಾಗ ಬಸವ ಪ್ರಣೀತವಾದ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯ ನಾಡಿನ ಅಭಿವೃದ್ಧಿಗೆ ಅನ್ನ ಮತ್ತು ಅಕ್ಷರ ದಾಸೋಹ ಎರಡನ್ನೂ ನೀಡಿದೆ. ಈ ಪರಂಪರೆಯನ್ನು ನಾವು ಬೇರೆ ರಾಜ್ಯದಲ್ಲಿ ಕಾಣಲು ಸಾಧ್ಯವಾಗುವದಿಲ್ಲ.

ಸಂತೋಷ್ ಲಾಡ್.

ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!