HomeSports NewsIPL 2025: RCB ಸೇರಿ ಈ ತಂಡಗಳು ಪ್ಲೇ ಆಫ್​ ಪ್ರವೇಶಿಸುತ್ತವೆ- ರಾಯುಡು ನುಡಿದ ಭವಿಷ್ಯ...

IPL 2025: RCB ಸೇರಿ ಈ ತಂಡಗಳು ಪ್ಲೇ ಆಫ್​ ಪ್ರವೇಶಿಸುತ್ತವೆ- ರಾಯುಡು ನುಡಿದ ಭವಿಷ್ಯ ಹೀಗಿದೆ!

For Dai;y Updates Join Our whatsapp Group

Spread the love

2025ರ ಐಪಿಎಲ್ ಈಗಾಗಲೇ ಅರ್ಧ ಹಾದಿಯನ್ನು ಮುಗಿಸಿದ್ದು, ಹೆಚ್ಚಿನ ತಂಡಗಳು 10 ಪಂದ್ಯಗಳನ್ನು ಆಡಿವೆ. ಈ ಬೆನ್ನಲ್ಲೇ ಈಗ ಪ್ಲೇ ಆಫ್​​ ಲೆಕ್ಕಾಚಾರ ಐಪಿಎಲ್​ ಅಂಗಳದಲ್ಲಿ ಜೋರಾಗಿದೆ. ಯಾವ ತಂಡ ಪ್ಲೇ ಆಫ್​ಗೆ ಎಂಟ್ರಿ ಕೊಡುತ್ತೆ? ಯಾವ ತಂಡ ಔಟ್​ ಆಗುತ್ತೆ? ಅನ್ನೋ ಚರ್ಚೆ ಶುರುವಾಗಿದೆ.

ಸದ್ಯ ಈ ತಂಡಗಳು ಪ್ಲೇ ಆಫ್ ಹಂತವನ್ನು ಪ್ರವೇಶ ಪಡೆಯಲಿವೆ ಎಂದು CSK ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು ಭವಿಷ್ಯ ನುಡಿದಿದ್ದಾರೆ.

ಗುಜರಾತ್ ಟೈಟಾನ್ಸ್: ಅಂಬಾಟಿ ರಾಯುಡು ಅವರ ಪ್ರಕಾರ, ಈ ಬಾರಿ ಗುಜರಾತ್ ಟೈಟಾನ್ಸ್ ತಂಡವು ಪ್ಲೇಆಫ್​ಗೆ ಪ್ರವೇಶಿಸುವುದು ಖಚಿತ. ಆಡಿರುವ 9 ಪಂದ್ಯಗಳಲ್ಲಿ 6 ಗೆಲುವು ದಾಖಲಿಸಿರುವ ಶುಭ್​ಮನ್ ಗಿಲ್ ನೇತೃತ್ವದ ಜಿಟಿ ಪಡೆ ಮುಂದಿನ ಪಂದ್ಯಗಳ ಮೂಲಕ ಪ್ಲೇಆಫ್ ಹಂತಕ್ಕೇರಲಿದೆ ಎಂದು ರಾಯುಡು ಹೇಳಿದ್ದಾರೆ.

ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ಮುಂದಾಳತ್ವದ ಪಂಜಾಬ್ ಕಿಂಗ್ಸ್ ತಂಡ ಕೂಡ ಮುಂದಿನ ಹಂತಕ್ಕೇರಲಿದೆ. ಪಂಜಾಬ್ ಕಿಂಗ್ಸ್ ತಂಡವು 10 ಪಂದ್ಯಗಳ ಮೂಲಕ 13 ಅಂಕಗಳನ್ನು ಕಲೆಹಾಕಿದ್ದು, ಹೀಗಾಗಿ ಪಂಜಾಬ್ ಪಡೆಯನ್ನು ಸಹ ಪ್ಲೇಆಫ್ ಪೈಪೋಟಿಯಲ್ಲಿ ಎದುರು ನೋಡಬಹುದು ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡವು ಆರಂಭದಲ್ಲಿ ವಿಫಲರಾದರೂ, ಆ ಬಳಿಕ ಬ್ಯಾಕ್ ಟು ಬ್ಯಾಕ್ 5 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇದೀಗ 10 ಪಂದ್ಯಗಳಿಂದ 12 ಅಂಕ ಪಡೆದಿರುವ ಮಂಬೈ ಇಂಡಿಯನ್ಸ್ ಕೂಡ ಮುಂದಿನ ಪಂದ್ಯಗಳ ಮೂಲಕ ಪ್ಲೇಆಫ್ ಹಂತಕ್ಕೇರಲಿದೆ ಎಂದು ರಾಯುಡು ಹೇಳಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್​ಸಿಬಿ ತಂಡವು ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದೆ. ಈಗಾಗಲೇ 10 ಪಂದ್ಯಗಳಲ್ಲಿ 7 ಗೆಲುವು ದಾಖಲಿಸಿರುವ ರಾಯಲ್ ಪಡೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಹೀಗಾಗಿ ಈ ಬಾರಿಯ ಪ್ಲೇಆಫ್​ನಲ್ಲಿ ಆರ್​ಸಿಬಿ ತಂಡ ಕೂಡ ಕಾಣಿಸಿಕೊಳ್ಳುವುದು ಖಚಿತ ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!