ಖ್ಯಾತ ಗಾಯಕ ಸೋನು ನಿಗಮ್ ಪಹ್ಲಗಾಮ್ ದಾಳಿಯ ಕುರಿತು ನೀಡಿರುವ ಹೇಳಿಕೆ ವಿವಾದ ಸೃಷ್ಟಿಸಿದೆ. ‘ಪಹಲ್ಗಾಮ್ ದಾಳಿಯಾಗಿದ್ದು ಕನ್ನಡದಿಂದಲೇ’ ಎಂಬರ್ಥ ಬರೋ ರೀತಿಯಲ್ಲಿ ಸೋನು ನಿಗಮ್ ಹೇಳಿಕೆ ನೀಡಿದ್ದಾರೆ. ಸೋನು ನಿಗಮ್ ಹೇಳಿಕೆಯಿಂದ ಕನ್ನಡ ಅಭಿಮಾನಿಗಳು ಗರಂ ಆಗಿದ್ದು ಸೋನು ನಿಗಮ್ ರನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡಬೇಕು ಎಂಬ ಒತ್ತಾಯ ಕೇಳಿ ಬಂದಿದೆ.
ಬೆಂಗಳೂರಿನ ಕಾಲೇಜೊಂದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೋನು ನಿಗಮ್ ಭಾಗವಹಿಸಿದ್ದರು. ಈ ವೇಳೆ ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹೇಳುವಂತೆ ಕೇಳಿದರು. ಈ ವೇಳೆ ಪ್ರತಿಕ್ರಿಯಿಸಿದ ಸೋನು ನಿಗಂ ನಾನು ಎಲ್ಲೇ ಹೋದರೂ ಕನ್ನಡ ಹಾಡು ಹೇಳುವ ಬಗ್ಗೆ ಒತ್ತಾಯ ಕೇಳಿ ಬರುತ್ತದೆ. ಈ ವೇಳೆ ತಾಳ್ಮೆ ಕಳೆದುಕೊಂಡ ಸೋನು ನಿಗಮ್. ತಮ್ಮ ಹಾಡನ್ನು ಅರ್ಧಕ್ಕೆ ನಿಲ್ಲಿಸಿದ್ದು, ‘ಕನ್ನಡ.. ಕನ್ನಡ ಇದೇ ಕಾರಣದಿಂದ ಪಹಲ್ಗಾಮ್ ದಾಳಿಯಾಗಿದ್ದು’ ಎಂದು ಹೇಳಿ ವಿವಾದ ಸೃಷ್ಟಿಸಿದ್ದಾರೆ.
‘ನನ್ನ ವೃತ್ತಿಜೀವನದಲ್ಲಿ ನಾನು ಬೇರೆ ಬೇರೆ ಭಾಷೆಗಳಲ್ಲಿ ಹಾಡಿದ್ದೇನೆ. ನಾನು ಹಾಡಿದ ಅತ್ಯುತ್ತಮ ಹಾಡುಗಳು ಕನ್ನಡದಲ್ಲಿವೆ. ನಾನು ಕರ್ನಾಟಕಕ್ಕೆ ಬಂದಾಗಲೆಲ್ಲಾ ತುಂಬಾ ಪ್ರೀತಿ, ಗೌರವದಿಂದ ಬರುತ್ತೇನೆ. ಪ್ರತಿ ಬಾರಿ ಯಾರಾದರೂ ಕನ್ನಡ ಎಂದು ಕೂಗಿದಾಗ ಅವರಿಗಾಗಿ ಕನ್ನಡ ಹಾಡನ್ನು ಹಾಡುವ ಸೋನು ನಿಗಂ ಅವರು ಈ ಬಾರಿ ನೀಡಿರುವ ಹೇಳಿಕೆ ಮಾತ್ರ ವಿವಾದಕ್ಕೆ ಕಾರಣವಾಗಿದೆ.
ಸೋಶಿಯಲ್ ಮೀಡಿಯಾದಲ್ಲಿ ಗಾಯಕನ ವಿರುದ್ಧ ಕನ್ನಡಿಗರು, ಕನ್ನಡ ಚಿತ್ರರಂಗದ ಕಲಾವಿದರು ಆಕ್ರೋಶ ಹೊರಹಾಕುತ್ತಿದ್ದಾರೆ. ಕನ್ನಡ ಪರ ಸಂಘಟನೆಗಳು ಸೋನು ನಿಗಮ್ ಕ್ಷಮೆ ಕೇಳಲು ಒತ್ತಾಯಿಸಿದ್ದಾರೆ. ಅವರನ್ನು ಬ್ಯಾನ್ ಮಾಡುವ ಒತ್ತಾಯವೂ ಕೇಳಿ ಬಂದಿದೆ. ಕನ್ನಡಕ್ಕೆ ಸೋನು ನಿಗಮ್ ಸಾಕಷ್ಟು ಪ್ರೀತಿ ತೋರಿಸಿದ್ದಾರೆ. ಹೀಗಾಗಿ, ಮತ್ತೊಂದು ಅವಕಾಶ ನೀಡಬೇಕು ಎನ್ನುವ ಆಗ್ರಹವೂ ಕೇಳಿ ಬಂದಿದೆ.