ಬೆಂಗಳೂರು:- ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು 2024-25ನೇ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ್ದಾರೆ. ಪ್ರತಿ ವರ್ಷದಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಕಳೆದ ಮಾರ್ಚ್-ಏಪ್ರಿಲ್ ನಲ್ಲಿ ನಡೆದಿದ್ದ SSLC ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಈ ಬಾರಿ 62.34% ಫಲಿತಾಂಶ ಬಂದಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಲ್ಲೇಶ್ವರಂನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ಒಟ್ಟು 22 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ (ಶೇ.91.12), ಉಡುಪಿ ಜಿಲ್ಲೆ (ಶೇ.89.96), ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆ ಮೊದಲ ನಾಲ್ಕು ಸ್ಥಾನ ಪಡೆದಿವೆ.
ಒಟ್ಟು ಫಲಿತಾಂಶ ಹೀಗಿದೆ!
ಹಾಜರಾದ ವಿದ್ಯಾರ್ಥಿಗಳು 842173.
ಉತ್ತೀರ್ಣರಾದರು 524984.
ಶೇಕಡಾ 62.34%.
ಫೇಲ್ ಆದವರು – 317,189.
SSLC ಫಲಿತಾಂಶ ದಿನಾಂಕ ಮತ್ತು ಸಮಯವನ್ನು ಪರೀಕ್ಷಾ ಮಂಡಳಿಯು ಅಧಿಕೃತವಾಗಿ ಘೋಷಿಸಿದ್ದು, 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು ಪ್ರಕಟವಾಗುತ್ತಿದೆ. ಮಾರ್ಚ್, ಏಪ್ರಿಲ್ ತಿಂಗಳಲ್ಲಿ 2,818 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 8,96,447 ವಿದ್ಯಾರ್ಥಿಗಳು ಹಾಜರಾಗಿದ್ದರು. 15,881 ಶಾಲೆಗಳ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಸೂಚನೆ: ಮಕ್ಕಳೇ ಫೇಲ್ ಆಗಿದ್ದರೆ ಚಿಂತೆ ಬಿಟ್ಟು, ಮತ್ತೊಮ್ಮೆ ಪರೀಕ್ಷೆ ಬರೆದು ಪಾಸಾಗಿ..