ಸುಹಾಸ್ ಶೆಟ್ಟಿ ಹತ್ಯೆಯಿಂದ ಮಂಗಳೂರು ಬೆಚ್ಚಿಬಿದ್ದಿದೆ: ಆರ್ ಅಶೋಕ್ ಕಿಡಿ!

0
Spread the love

ಬೆಂಗಳೂರು:- ಸುಹಾಸ್ ಶೆಟ್ಟಿ ಹತ್ಯೆಯಿಂದ ಇಡೀ ಮಂಗಳೂರು ಬೆಚ್ಚಿಬಿದ್ದಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಕುರಿತು ಮಾತನಾಡಿದ ಅವರು, ನೇಹಾ ಹತ್ಯೆಯಾದಾಗ, ಲವ್ ಜಿಹಾದ್ ಆದಾಗ ಕಠಿಣ ಕ್ರಮ ತೆಗೆದುಕೊಳ್ಳಬೇಕಿತ್ತು. ಆಗ ಕ್ರಮ ಕೈಗೊಳ್ಳದ ಹಿನ್ನೆಲೆ ಈ ಥರ ಕೊಲೆಗಳಾಗುತ್ತಿವೆ ಎಂದರು.

Advertisement

ಇಡೀ ಮಂಗಳೂರು ಸುಹಾಸ್ ಶೆಟ್ಟಿ ಹತ್ಯೆಯಿಂದ ಬೆಚ್ಚಿಬಿದ್ದಿದೆ. ಇಂದು ಮಂಗಳೂರು ಬಂದ್‌ಗೂ ಕರೆ ಕೊಡಲಾಗಿದೆ. ಈಥರದ ಘಟನೆಗಳು ಹಿಂದೆ ಕಾಂಗ್ರೆಸ್ ಇದ್ದಾಗಲೂ ಆಗಿವೆ. ಸಿದ್ದರಾಮಯ್ಯ ಮೊದಲ ಅವಧಿಯಲ್ಲಿ 56 ಹಿಂದೂ ಕಾರ್ಯಕರ್ತರ ಕೊಲೆ ಆಗಿದೆ. ಕಾಂಗ್ರೆಸ್ ಬಂದಾಗೆಲ್ಲ ಪಾಕ್ ಜಿಂದಾಬಾದ್ ಕೂಗುವರು, ಪಾಕ್ ಬಾವುಟ ಪ್ರದರ್ಶನ ಮಾಡುವವರು ಹೆಚ್ಚಾಗಿದ್ದಾರೆ. ಸುಹಾಸ್ ಹತ್ಯೆಗೂ ಪಾಕಿಸ್ತಾನ ಜಿಂದಾಬಾದ್ ಕಾರಣ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಕಿಡಿಕಾರಿದ್ದಾರೆ.

ಪಾಕಿಸ್ತಾನ ಜಿಂದಾಬಾದ್ ಕೂಗುವವರ ವಿರುದ್ಧ ಕ್ರಮ ಕೈಗೊಳುತ್ತಿಲ್ಲ. ದೇಶದ್ರೋಹಿಗಳ ವಿರುದ್ಧ ಗುಂಡು ಹೊಡೆದು ಸಾಯಿಸುವ ಕಾನೂನು ಬರಬೇಕು. ಸುಹಾಸ್ ಕೊಲೆ ಹಿಂದೂ ಕಾರ್ಯಕರ್ತರಿಗೆ ಬಹಳ ನೋವುಂಟು ಮಾಡಿದೆ. ಇನ್ನೆಷ್ಟು ಹಿಂದೂಗಳ ಹತ್ಯೆ ಆಗಬೇಕು? ಸುಹಾಸ್ ಶೆಟ್ಟಿ ಚಲನವಲನ ಬಗ್ಗೆ ಹತ್ಯೆಕೋರರಿಗೆ ಹೇಳಿದವರು ಯಾರು? ಇದರಲ್ಲಿ ಪೊಲೀಸ್ ಇಲಾಖೆ ಕೈವಾಡ ಇದೆಯಾ ಅಂತಲೂ ತನಿಖೆ ನಡೆಯಬೇಕು. ಸಿದ್ದರಾಮಯ್ಯ ಸರ್ಕಾರ ಬಂದ ಕಾನೂನು ಸುವ್ಯವಸ್ಥೆ ತೀರ ಹದಗೆಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


Spread the love

LEAVE A REPLY

Please enter your comment!
Please enter your name here