ಬೆಂಗಳೂರು:- ಕರ್ನಾಟಕ ರಾಜ್ಯ ಶಾಂತಿಯಿಂದ ಇರಲು ಬಿಜೆಪಿ ಸಹಕರಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿಗಳಾಗಿರುವ ಡಿಕೆ ಶಿವಕುಮಾರ್ ಹೇಳಿದ್ದಾರೆ.
Advertisement
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, “ಸುಹಾಸ್ ಶೆಟ್ಟಿ ಹತ್ಯೆಯನ್ನು ಬಿಜೆಪಿಯವರು ರಾಜಕೀಯಕ್ಕೆ ಬಳಸಿಕೊಳ್ಳಬಾರದು. ಕರ್ನಾಟಕ ರಾಜ್ಯ ಶಾಂತಿಯಿಂದ ಇದೆ. ಶಾಂತಿಯಿಂದ ಇರುವುದಕ್ಕೆ ಬಿಜೆಪಿಯವರು ಸಹಕಾರ ನೀಡಬೇಕು ಎಂದರು. “ಹತ್ಯೆಯಲ್ಲಿ ಭಾಗಿಯಾಗಿರುವ ತಪ್ಪಿತಸ್ಥರ ವಿರುದ್ಧ ಪೊಲೀಸರು ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ. ಈ ವಿಚಾರದಲ್ಲಿ ನಾವು ತಲೆಹಾಕಲು ಹೋಗುವುದಿಲ್ಲ” ಎಂದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎನ್ನುವ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ಇದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ಮಂಗಳೂರಿನ ಪೊಲೀಸರು ಉತ್ತಮ ಸಾಮರ್ಥ್ಯ ಹೊಂದಿದ್ದಾರೆ. ಈ ಘಟನೆ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ” ಎಂದರು.