HomePolitics Newsಸಂವಿಧಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳವುದು ನಮ್ಮೆಲ್ಲರ ಕರ್ತವ್ಯ: ಸಿಎಂ ಸಿದ್ದರಾಮಯ್ಯ!

ಸಂವಿಧಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳವುದು ನಮ್ಮೆಲ್ಲರ ಕರ್ತವ್ಯ: ಸಿಎಂ ಸಿದ್ದರಾಮಯ್ಯ!

For Dai;y Updates Join Our whatsapp Group

Spread the love

ಬೆಂಗಳೂರು: ಸಂವಿಧಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳವುದು ನಮ್ಮೆಲ್ಲರ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಯಲಹಂಕದಲ್ಲಿ 14 ಅಡಿಗಳ ಬಾಬಾ ಸಾಹೇಬ್ ಅಂಬೇಡ್ಕರ್ ಕಂಚಿನ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ಸಂವಿಧಾನ ರಕ್ಷಣೆ ಆದರೆ ನಮ್ಮ ಹಕ್ಕುಗಳೂ ರಕ್ಷಣೆಯಾಗುತ್ತವೆ. ಸಂವಿಧಾನ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ. ಸಂವಿಧಾನಕ್ಕೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳವುದು ನಮ್ಮೆಲ್ಲರ ಕರ್ತವ್ಯ ಎಂದರು. ನಮ್ಮ ದೇಶ, ನಮ್ಮ ಸಮಾಜಕ್ಕೆ ಅವಶ್ಯವಾಗಿದ್ದಂತಹ ಅತ್ಯುತ್ತಮ ಸಂವಿಧಾನವನ್ನು ನೀಡಿದವರು ಬಾಬಾ ಸಾಹೇಬ್ ಅಂಬೇಡ್ಕರ್. ಈ ದೇಶದ ಸಾಮಾಜಿಕ ಪರಿಸ್ಥಿತಿ, ಜಾತಿ ವ್ಯವಸ್ಥೆ ಅಂಬೇಡ್ಕರ್ ಅವರಿಗೆ ಅರ್ಥ ಆದಷ್ಟು ಬೇರೆಯವರಿಗೆ ಆಗಿರಲಿಲ್ಲವೆಂದರೆ ಅದು ಅತಿಶಯೋಕ್ತಿಯಲ್ಲ. ಜಾತಿ ವ್ಯವಸ್ಥೆ ಇದ್ದಷ್ಟೂ ಕಾಲ ಮೀಸಲಾತಿ ಇರಲೇಬೇಕು ಎಂಬುದನ್ನು ಅವರು ಬಲವಾಗಿ ನಂಬಿದ್ದರು ಎಂದರು.

ನಮ್ಮ ದೇಶದ ಜಾತಿ ವ್ಯವಸ್ಥೆಗೆ ಚಲನೆ ಇಲ್ಲ. ಆದರೆ ವರ್ಗಕ್ಕೆ ಚಲನೆಯಿದೆ. ನಮ್ಮ ಸಮಾಜದಲ್ಲಿ ಶ್ರೀಮಂತ ಬಡವನಾದರೂ, ಬಡವ ಶ್ರೀಮಂತನಾದರೂ ಕಡೆಯವರೆಗೂ ಉಳಿದು ಕೊಳ್ಳುವುದು ಹುಟ್ಟಿದ ಜಾತಿಯಲ್ಲಿ ಮಾತ್ರ. ಆದ್ದರಿಂದ ಈ ಜಾತಿ ವ್ಯವಸ್ಥೆ ನಿಂತ ನೀರಿನಂತೆ. ಇದನ್ನು ಮನಗಂಡಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸ್ವಾತಂತ್ರ್ಯ ಯಶಸ್ಸನ್ನು ಕಾಣಬೇಕಾದರೆ ಈ ದೇಶದ ಅವಕಾಶ ವಂಚಿತರು, ಶೋಷಿತರು, ದೌರ್ಜನ್ಯಕ್ಕೆ ಒಳಗಾದವರಿಗೆಲ್ಲರಿಗೂ ಸಮಾನ ಅವಕಾಶಗಳು ದೊರೆತು ಅವರೆಲ್ಲರೂ ಸಾಮಾಜಿಕವಾಗಿ, ಆರ್ಥಿಕವಾಗಿ ಸಬಲರಾದಾಗ ಮಾತ್ರ ಸ್ವಾತಂತ್ರ್ಯಕ್ಕೆ ನಿಜವಾದ ಅರ್ಥ ಸಿಗುತ್ತದೆ ಎಂದು ಹೇಳಿದ್ದರು ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!