ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ಸಿದ್ದಲಿಂಗ ನಗರದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಸ್ಪೂರ್ತಿ ನಿಂಗಪ್ಪ ಉಡಚಗೊಂಡ ಶೇ. 96 ಅಂಕ ಪಡೆಯುವ ಮೂಲಕ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಲಕ್ಷ್ಮೀ ಅಶೋಕ್ ನಲೂಡಿ ಶೇ. 89.92 ಅಂಕಗಳೊಂದಿಗೆ ದ್ವಿತೀಯ ಸ್ಥಾನ, ಕೀರ್ತಿ ಶೇಖಪ್ಪ ನಾಯ್ಕರ ಶೇ. 86.08 ಅಂಕಗಳೊಂದಿಗೆ ಶಾಲೆಗೆ ತೃತೀಯ ಸ್ಥಾನ ಪಡೆದಿದ್ದಾಳೆ.
4 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 49 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 26 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ, 7 ವಿದ್ಯಾರ್ಥಿಗಳು ತೃತೀಯ ಶ್ರೇಣಿ ಪಡೆಯುವ ಮೂಲಕ ಅತ್ಯುತ್ತಮ ಸಾಧನೆ ಮಾಡಿ ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ. ಒಟ್ಟಾರೆ ಶಾಲೆಯ ಫಲಿತಾಂಶ ಪ್ರತಿಶತ ಶೇ. 63.23 ಆಗಿದೆ.
ವಿದ್ಯಾರ್ಥಿಗಳ ಸಾಧನೆಗೆ ಎಸ್.ಡಿ.ಎಂ.ಸಿ. ಅಧ್ಯಕ್ಷರು, ಸಾರ್ವಜನಿಕ ಶಿಕ್ಷಣ ಇಲಾಖೆ ಆಧಿಕಾರಿಗಳು, ಸರ್ವ ಪದಾಧಿಕಾರಿಗಳು, ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ.