ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮೇ.6 ರಿಂದ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ!

0
Spread the love

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೇ.6 ರಿಂದ ಭಾರೀ ಮಳೆ ಆಗಲಿದ್ದು, ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಎಸ್, ಕರ್ನಾಟಕದಾದ್ಯಂತ ಮೇ 6ರಿಂದ ಭಾರಿ ಮಳೆ ಯಾಗಲಿದ್ದು, ಬೆಂಗಳೂರು ಸೇರಿ 12 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೊಷಿಸಲಾಗಿದೆ. ಇಂದು ಕೂಡ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Advertisement

ವಿಜಯನಗರ, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಇಂದು ಮಳೆಯಾಗಲಿದೆ.

ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಕೋಲಾರ, ವಿಜಯನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಮೇ 6ರಿಂದ ಭಾರಿ ಮಳೆಯಾಗಲಿದೆ. ಧಾರವಾಡದಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 37.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 41.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here