ತುಮಕೂರು:- ಲಾರಿಯೊಂದು ನಡುರೋಡಲ್ಲಿ ಹೊತ್ತಿ ಉರಿದಿದ್ದು, ಚಾಲಕ ಗ್ರೇಟ್ ಎಸ್ಕೇಪ್ ಆಗಿರುವ ಘಟನೆ ತುಮಕೂರಿನ ಕ್ಯಾತಸಂದ್ರ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಜರುಗಿದೆ.
Advertisement
ಈ ಲಾರಿ ಡಾಬಸ್ ಪೇಟೆಯಿಂದ ವಸಂತ ನರಸಾಪುರ ಕಡೆಗೆ ತೆರಳುತ್ತಿತ್ತು. ಈ ವೇಳೆ ಲಾರಿಯ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಲಾರಿಯನ್ನು ಬಿಟ್ಟು ಚಾಲಕ ಕೆಳಗೆ ಇಳಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬೆಂಕಿ ಕೆನ್ನಾಲಿಗೆಗೆ ಲಾರಿ ಸುಟ್ಟು ಭಸ್ಮವಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.