ಹಾಸನ:- ರಸ್ತೆ ಅಪಘಾತದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಕೆಂಚನಹಳ್ಳಿ ಬಳಿ ನಡೆದಿದೆ. 38 ವರ್ಷದ ಪ್ರಕಾಶ್ ಮೃತ ಪೊಲೀಸ್ ಕಾನ್ಸ್ಟೇಬಲ್.
Advertisement
ಕಾನ್ಸ್ಟೇಬಲ್ ಪ್ರಕಾಶ್ ಅವರು ಹಾಸನ ನಗರದಿಂದ ಸರ್ಕಾರಿ ದ್ವಿಚಕ್ರ ವಾಹನದಲ್ಲಿ ಗಾಡೇನಹಳ್ಳಿಗೆ ಕರ್ತವ್ಯಕ್ಕೆ ತೆರಳುತ್ತಿದ್ದರು. ಈ ವೇಳೆ ಬೈಕ್ಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.