ಹಾವೇರಿ:– ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ತಾಲೂಕಿನ ಗೌರಾಪುರ ಗ್ರಾಮದಲ್ಲಿ ಜರುಗಿದೆ. ನಾಗರಾಜ್ ಪವಾಡಿ(35) ಮೃತ ಬೈಕ್ ಸವಾರ.
Advertisement
ಮೃತ ನಾಗರಾಜ್, ಹೊಸ ಬೈಕ್ ಖರೀದಿಸಿ ಮನೆಗೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ನಲ್ಲಿದ್ದ ಇನ್ನೋರ್ವ ವ್ಯಕ್ತಿಗೂ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.