ವಿಜಯಸಾಕ್ಷಿ ಸುದ್ದಿ, ಡಂಬಳ: ಗ್ರಾಮದ ಮುಂಡರಗಿ ತಾಲೂಕಿನ ಮಹಮ್ಮದರಫೀಕ ತಾಂಬೋಟಿ ಅವರ ಪುತ್ರಿ ಸುಹಾನಾ ಮಹಮ್ಮದರಫೀಕ ತಾಂಬೋಟಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 607 ಅಂಕ (ಶೇ. 97.12) ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿ, ಗದಗ ಮಲ್ಲಸಮುದ್ರ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆಗೆ ಹಾಗೂ ಗ್ರಾಮಕ್ಕೆ ಕೀರ್ತಿ ತಂದಿದ್ದಾಳೆ. ವಿದ್ಯಾರ್ಥಿನಿಗೆ ಅಂಜುಮನ್ ಸಮಿತಿ, ಗ್ರಾಮದ ಹಿರಿಯರು, ಶಿಕ್ಷಣ ಪ್ರೇಮಿಗಳು ಅಭಿನಂದನೆ ಸಲ್ಲಿಸಿದ್ದಾರೆ.
Advertisement