ದಾವಣಗೆರೆ:- ದುಷ್ಕರ್ಮಿಗಳ ಗುಂಪೊಂದು ಹಾಡಹಗಲೇ ರೌಡಿಶೀಟರ್ ಓರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ದಾವಣಗೆರೆ ನಗರದ ಖಾಸಗಿ ಆಸ್ಪತ್ರೆಯೊಂದರ ಮುಂಭಾಗದಲ್ಲಿ ಜರುಗಿದೆ.
Advertisement
ಸಂತೋಷ್ ಕುಮಾರ್ ಅಲಿಯಾಸ್ ಕಣುಮಾ ಹತ್ಯೆಗೀಡಾದ ರೌಡಿಶೀಟರ್. ಹತ್ಯೆಗೀಡಾದ ರೌಡಿಶೀಟರ್ ರಿಯಲ್ ಎಸ್ಟೇಟ್ ಸೆಟಲ್ಮೆಂಟ್ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ. ಆಟೋದಲ್ಲಿ ಬಂದ ನಾಲ್ಕೈದು ಜನ ದುಷ್ಕರ್ಮಿಗಳು ಸಂತೋಷ್ ಮುಖಕ್ಕೆ ಪೆಪ್ಪರ್ ಸ್ಪ್ರೈ ಮಾಡಿ, ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ದಾವಣಗೆರೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.