ಹುಬ್ಬಳ್ಳಿ:- ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಕ್ರಾಸ್ ಬಳಿ ಜರುಗಿದೆ. ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಶ್ವೇತ (29), ಅಂಜಲಿ(26), ಸಂದೀಪ್ (26), ವಿಠ್ಠಲ (55) ಮತ್ತು ಶಶಿಕಲಾ ಮೃತರು.
ಇವರೆಲ್ಲರೂ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನವರು ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿರುವ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು, ಮೃತದೇಹಗಳನ್ನು ಹುಬ್ಬಳ್ಳಿಯ ಕಿಮ್ಸ್ ಗೆ ರವಾನೆ ಮಾಡಿದ್ದಾರೆ.
ಹೋಟೆಲ್ ವ್ಯಾಪಾರಕ್ಕೆಂದು ಬಾಗಲಕೋಟೆಗೆ ತೆರಳುತ್ತಿದ್ದ ಸಮಯದಲ್ಲಿ ಈ ದುರ್ಘಟನೆ ನಡೆದಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



