ಎರಡು ದಿನದಿಂದ ನಾಪತ್ತೆಯಾಗಿದ್ದ ಆರೋಗ್ಯ ಇಲಾಖೆ ಲ್ಯಾಬ್ ಟೆಕ್ನಿಷಿಯನ್ ಹೆಣವಾಗಿ ಪತ್ತೆ!

0
Spread the love

ರಾಯಚೂರು: ಜಿಲ್ಲೆಯ ಮಸ್ಕಿ ಪಟ್ಟಣದ ಬಳಿ ಠಾಕೂರ್ ಲೇಔಟ್​​ನಲ್ಲಿ ನಾಪತ್ತೆಯಾಗಿದ್ದ ಆರೋಗ್ಯ ಇಲಾಖೆ ಲ್ಯಾಬ್ ಟೆಕ್ನಿಷಿಯನ್ ಇದೀಗ​​ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವಂತಹ ಘಟನೆ ಜರುಗಿದೆ. 33 ವರ್ಷದ ಮಂಜುನಾಥ್ ಮೃತ ಲ್ಯಾಬ್ ಟೆಕ್ನಿಷಿಯನ್. ಸದ್ಯ ಸ್ಥಳಕ್ಕೆ ಮಸ್ಕಿ ಪಟ್ಟಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Advertisement

ಮೃತ ಮಂಜುನಾಥ್ ಪತ್ನಿ ಲಕ್ಷ್ಮೀ ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಮೃತ ಮಂಜುನಾಥ್​​ ಮೆದಿಕಿನಾಳದಲ್ಲಿರುವ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು.​

ಪತ್ನಿ ಲಕ್ಷ್ಮೀ ಮತ್ತು ಇಬ್ಬರು ಮಕ್ಕಳೊಂದಿಗೆ ಮಸ್ಕಿ ಪಟ್ಟಣದಲ್ಲಿ ವಾಸವಾಗಿದ್ದರು. ಕಳೆದ ಎರಡು ದಿನಗಳಿಂದ ಮಂಜುನಾಥ್​ ನಾಪತ್ತೆಯಾಗಿದ್ದರು. ಚರಂಡಿಯೊಂದರ ಬಳಿ 2 ದಿನ ನಿಂತಲ್ಲೇ ನಿಲ್ಲಿಸಲಾಗಿದ್ದ ಬೈಕ್​​ ಪರಿಶೀಲನೆ ಮಾಡಿದಾಗ ಘಟನೆ ಬೆಳಕಿಗೆ ಬಂದಿದೆ. ಸದ್ಯ ಮಂಜುನಾಥ್ ಪತ್ನಿ ಲಕ್ಷ್ಮೀ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.


Spread the love

LEAVE A REPLY

Please enter your comment!
Please enter your name here