HomeIndia NewsBREAKING: ಅಕ್ರಮ ಗಣಿಗಾರಿಕೆ ಪ್ರಕರಣ: ಶಾಸಕ ಜನಾರ್ದನ ರೆಡ್ಡಿಗೆ ಬಿಗ್‌ ಶಾಕ್‌! 7 ವರ್ಷ ಶಿಕ್ಷೆ...

BREAKING: ಅಕ್ರಮ ಗಣಿಗಾರಿಕೆ ಪ್ರಕರಣ: ಶಾಸಕ ಜನಾರ್ದನ ರೆಡ್ಡಿಗೆ ಬಿಗ್‌ ಶಾಕ್‌! 7 ವರ್ಷ ಶಿಕ್ಷೆ ವಿಧಿಸಿದ ಸಿಬಿಐ ಕೋರ್ಟ್

For Dai;y Updates Join Our whatsapp Group

Spread the love

ಬಳ್ಳಾರಿ/ನವದೆಹಲಿ: ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದ ತೀರ್ಪನ್ನು ಹೈದರಾಬಾದ್ ನ ಸಿಬಿಐ ನ್ಯಾಯಾಲಯ ಇಂದು ಪ್ರಕಟಿಸಿದೆ. ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜನಾರ್ದನ ರೆಡ್ಡಿ ದೋಷಿ ಎಂದು ಸಿಬಿಐ ಕೋರ್ಟ್‌ ತೀರ್ಪು ನೀಡಿದೆ.

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಓಬಳಾಪುರಂನಲ್ಲಿ ನಡೆದ ಅಕ್ರಮ ಗಣಿಗಾರಿಕೆ ಕೇಸ್‌ ದೇಶಾದ್ಯಂತ ಸಂಚಲನ ಸೃಷ್ಟಿ ಮಾಡಿತ್ತು. ಆರೋಪ ಪ್ರಕರಣದ ವಾದ – ಪ್ರತಿವಾದವನ್ನು ಆಲಿಸಿದ ಸಿಬಿಐ ನ್ಯಾಯಾಲಯವು ಇಂದು ತೀರ್ಪು ನೀಡಿದೆ. ಬರೋಬ್ಬರಿ 13 ವರ್ಷಗಳಿಂದ ನಡೆದ ಸುದೀರ್ಘ ವಿಚಾರಣೆ ನಡೆದಿತ್ತು.

ಗಾಲಿ ಜನಾರ್ದನ ರೆಡ್ಡಿ ಸೇರಿದಂತೆ ಐವರಿಗೆ ವಿಧಿಸಲಾಗಿದೆ. ಎ1 ಶ್ರೀನಿವಾಸ ರೆಡ್ಡಿ, ಎ2 ಗಾಲಿ ಜನಾರ್ದನ ರೆಡ್ಡಿ, ಎ3 ರಾಜಗೋಪಾಲ್, ಎ4 ಓಬಳಾಪುರಂ ಮೈನಿಂಗ್ ಕಂಪನಿ ಮತ್ತು ಎ7 ಅಲಿ ಖಾನ್ ದೋಷಿಗಳೆಂದು ನ್ಯಾಯಾಲಯ ತೀರ್ಪು ನೀಡಿದೆ. ಇನ್ನೂ ಕೋರ್ಟ್‌ನಿಂದ ಏಳು ವರ್ಷಗಳ ಶಿಕ್ಷೆ ನೀಡಿದೆ.

ಮೂರು ಸಾವಿರಕ್ಕೂ ಅಧಿಕ ದಾಖಲೆಗಳನ್ನು ಪರಿಶೀಲಿಸಲಾಗಿದೆ ಮತ್ತು 219 ಸಾಕ್ಷಿಗಳನ್ನು ವಿಚಾರಣೆ ನಡೆಸಲಾಗಿತ್ತು. ಮಾಜಿ ಸಚಿವ ಮತ್ತು ಹಾಲಿ ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ದನ ರೆಡ್ಡಿ, ಬಿ.ವಿ ಶ್ರೀನಿವಾಸ ರೆಡ್ಡಿ, ವಿರುದ್ಧ ಐಪಿಸಿ ಸೆಕ್ಷನ್ 120 ಬಿ, 420, 409, 468 ಮತ್ತು 471 ಹಾಗೂ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 13(2) ಜೊತೆಗೆ 13(1)(ಡಿ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!