ನವದೆಹಲಿ:- ಆಪರೇಷನ್ ಸಿಂಧೂರದ ಮೂಲಕ ನರಮೇಧಕ್ಕೆ ತಕ್ಕ ಉತ್ತರ ಕೊಡಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾರತೀಯ ಸಶಸ್ತ್ರ ಪಡೆಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅಮಿತ್ ಶಾ, ನಮ್ಮ ಸಶಸ್ತ್ರ ಪಡೆಗಳ ಬಗ್ಗೆ ಹೆಮ್ಮೆಯಿದೆ. ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ನಮ್ಮ ಮುಗ್ಧ ಸಹೋದರರ ಕ್ರೂರ ಹತ್ಯೆಗೆ ಆಪರೇಷನ್ ಸಿಂಧೂರದ ಮೂಲಕ ಭಾರತ ಉತ್ತರ ನೀಡಿದೆ. ಭಾರತ ಮತ್ತು ಅಲ್ಲಿನ ಜನರ ಮೇಲಿನ ಯಾವುದೇ ದಾಳಿಗೆ ಸೂಕ್ತ ಪ್ರತಿಕ್ರಿಯೆ ನೀಡಲು ಮೋದಿ ಸರ್ಕಾರವು ನಿರ್ಧರಿಸಿದೆ. ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತು ಹಾಕಲು ಭಾರತ ಸದಾ ಸಿದ್ಧ ಎಂದು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.



