ಇದು ಪ್ರಾರಂಭವಷ್ಟೇ. ಉಗ್ರ ಪೋಷಕ ಪಾಕಿಸ್ತಾನಕ್ಕೆ ಭಾರತ ತಕ್ಕ ಪಾಠ ಕಲಿಸುತ್ತದೆ: ಶಾಸಕ ಯತ್ನಾಳ್

0
Spread the love

ವಿಜಯಪುರ: ಇದು ಪ್ರಾರಂಭವಷ್ಟೇ. ಉಗ್ರ ಪೋಷಕ ಪಾಕಿಸ್ತಾನಕ್ಕೆ ಭಾರತ ತಕ್ಕ ಪಾಠ ಕಲಿಸುತ್ತದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಮೇ 7ರಂದು ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್‌ ವಿಚಾರವಾಗಿ ಎಕ್ಸ್‌ನಲ್ಲಿ ಪೋಸ್ಟ್ ಹಾಕಿಕೊಂಡಿರುವ ಅವರು,

Advertisement

ಭಾರತೀಯ ಸೇನೆಯಿಂದ ನಡೆದ ಏರ್‌ಸ್ಟ್ರೈಕ್‌`ಆಪರೇಷನ್ ಸಿಂಧೂರ’ ಪ್ರತೀಕಾರದ ದಾಳಿಯನ್ನು ಸ್ವಾಗತಿಸಿದ್ದಾರೆ. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಭಾರತೀಯ ಸೇನೆ, ನೌಕಾ ಪಡೆ ಹಾಗೂ ವಾಯು ಪಡೆಗಳು ಉಗ್ರರ ನೆಲೆಯ ಮೇಲೆ ದಾಳಿ ನಡೆಸಿದೆ ಎಂದು ಉಲ್ಲೇಖಿಸಿದ್ದಾರೆ.

ಏ.22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್‌ನ ಬೈಸರನ್ ಕಣಿವೆಯಲ್ಲಿ ನಡೆದಿದ್ದ ಅಮಾಯಕ ಪ್ರವಾಸಿಗರ ಹತ್ಯೆಯ ಪ್ರತೀಕಾರವನ್ನು ಭಾರತೀಯ ಸೇನೆ ತೆಗೆದುಕೊಂಡಿದೆ. ಇದು ಪ್ರಾರಂಭವಷ್ಟೇ.

ಉಗ್ರ ಪೋಷಕ ಪಾಕಿಸ್ತಾನಕ್ಕೆ ಭಾರತ ತಕ್ಕ ಪಾಠ ಕಲಿಸುತ್ತದೆ. ಸಮಸ್ತ ಭಾರತೀಯರ ಪರವಾಗಿ ಈ ದಾಳಿಯನ್ನು ಸ್ವಾಗತಿಸುತ್ತೇನೆ. ಸೇನೆ ಮತ್ತು ಸರ್ಕಾರದ ಜೊತೆ ನಾವೆಲ್ಲರೂ ನಿಲ್ಲೋಣ. ಭಾರತ ಮಾತೆಗೆ ಜಯವಾಗಲಿ, ಜೈ ಹಿಂದ್ ಎಂದು ಬರೆದುಕೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here