HomeSports NewsIPL 2025: ದೇವದತ್ ಪಡಿಕ್ಕಲ್ ಔಟ್: ಮತ್ತೋರ್ವ ಕನ್ನಡಿಗ ಇನ್..!

IPL 2025: ದೇವದತ್ ಪಡಿಕ್ಕಲ್ ಔಟ್: ಮತ್ತೋರ್ವ ಕನ್ನಡಿಗ ಇನ್..!

For Dai;y Updates Join Our whatsapp Group

Spread the love

IPL 2025 ರಲ್ಲಿ ಅತ್ಯದ್ಭುತ ಪ್ರದರ್ಶನ ತೋರುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಘಾತ ಎದುರಾಗಿದೆ. ಗಾಯದ ಸಮಸ್ಯೆಯಿಂದಾಗಿ ಕನ್ನಡಿಗ ದೇವದತ್ ಪಡಿಕ್ಕಲ್ ಅವರು ಟೂರ್ನಿಯಿಂದಲೇ ಹೊರ ಬಿದ್ದಿದ್ದಾರೆ. ಇದೀಗ ಅವರ ಬದಲಿಗೆ ಕನ್ನಡಿಗ ಮಯಾಂಕ್ ಅಗರ್ವಾಲ್ ಆಯ್ಕೆಯಾಗಿದ್ದಾರೆ. ಮಯಾಂಕ್ ಅಗರ್ವಾಲ್ 12 ವರ್ಷಗಳ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದರು. ಅದರಲ್ಲೂ ಅವರು ಐಪಿಎಲ್ ಕೆರಿಯರ್ ಆರಂಭಿಸಿದ್ದು ಆರ್​ಸಿಬಿ ಪರ ಕಣಕ್ಕಿಳಿಯುವ ಮೂಲಕ ಎಂಬುದು ವಿಶೇಷ. 2011 ರಲ್ಲಿ ಮಯಾಂಕ್ ಅಗರ್ವಾಲ್ ಆರ್​ಸಿಬಿ ತಂಡಕ್ಕೆ ಆಯ್ಕೆಯಾಗಿದ್ದರು.

ಮೊದಲ ಸೀಸನ್​ನಲ್ಲಿ 8 ಪಂದ್ಯಗಳನ್ನಾಡಿದ್ದ ಮಯಾಂಕ್ 141 ರನ್​ ಕಲೆಹಾಕಿದ್ದರು. ಹೀಗಾಗಿ ಅವರನ್ನು 2012 ರಲ್ಲೂ ತಂಡದಲ್ಲೇ ಉಳಿಸಲಾಗಿತ್ತು. ಅದರಂತೆ 2012 ರಲ್ಲಿ 16 ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದ ಅವರು ಒಟ್ಟು 216 ರನ್ ಬಾರಿಸಿದ್ದರು. ಇನ್ನು 2013 ರಲ್ಲೂ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಮಯಾಂಕ್ 5 ಪಂದ್ಯಗಳಲ್ಲಿ ಕೇವಲ 67 ರನ್​ ಮಾತ್ರ ಗಳಿಸಿದ್ದರು. 2013 ರಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಪರಿಣಾಮ ಮರು ವರ್ಷವೇ ಮಯಾಂಕ್ ಅಗರ್ವಾಲ್ ಅವರನ್ನು ಆರ್​ಸಿಬಿ ತಂಡದಿಂದ ಕೈ ಬಿಟ್ಟಿತ್ತು. ಇದಾದ ಬಳಿಕ 2014 ರಿಂದ 2016ರವರೆಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದರು. 2017 ರಲ್ಲಿ ರೈಸಿಂಗ್ ಪುಣೆ ಜೈಂಟ್ಸ್​ ತಂಡದಲ್ಲಿದ್ದ ಮಯಾಂಕ್ ಅವರು ಆ ಬಳಿಕ 2018 ರಿಂದ 2022 ರವರೆಗೆ ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿದಿದ್ದರು.

2023 ಹಾಗೂ 2024 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಕಾಣಿಸಿಕೊಂಡಿದ್ದ ಮಯಾಂಕ್ ಅಗರ್ವಾಲ್ ಅವರನ್ನು ಈ ಬಾರಿಯ ಮೆಗಾ ಹರಾಜಿನಲ್ಲಿ ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದೀಗ ಬದಲಿ ಆಟಗಾರನಾಗಿ ಕನ್ನಡಿಗ ಆರ್​ಸಿಬಿ ತಂಡಕ್ಕೆ ರಿಎಂಟ್ರೆ ಕೊಟ್ಟಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!