ಮಂಡ್ಯ:- ʻಆಪರೇಷನ್ ಸಿಂಧೂರʼ ಯಶಸ್ವಿ ಹಿನ್ನೆಲೆ ಮಂಡ್ಯ ಜಿಲ್ಲೆಯ ನಿಮಿಷಾಂಭ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಕೆ ಮಾಡಲಾಗಿದೆ.
ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಚರಣೆ ಯಶಸ್ವಿ ಹಿನ್ನೆಲೆ ಕರ್ನಾಟಕ ಸರ್ಕಾರವು ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಲ್ಲಿ ಯೋಧರ ಹೆಸರಿನಲ್ಲಿ ವಿಶೇಷ ಪೂಜೆ ಮತ್ತು ಸಂಕಲ್ಪ ಮಾಡಲು ಆದೇಶಿಸಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ನಿಮಿಷಾಂಭ ದೇಗುಲದಲ್ಲಿ ಸೈನಿಕರ ಹೆಸರಲ್ಲಿ ಪೂಜೆ ಸಲ್ಲಿಸಲಾಗಿದೆ.
ಸಚಿವ ರಾಮಲಿಂಗಾರೆಡ್ಡಿ ಅವರು ಭಾರತೀಯ ಸೇನೆಗೆ ಶುಭ ಹಾರೈಸಿದ್ದಾರೆ ಮತ್ತು ಯೋಧರಿಗೆ ಒಳಿತಾಗಲೆಂದು ಪ್ರಾರ್ಥಿಸಿ ಪೂಜೆ ಸಲ್ಲಿಸಲು ಸೂಚಿಸಿದ್ದಾರೆ. ರಾಜ್ಯದ ಪ್ರಸಿದ್ಧ ದೇಗುಲದಲ್ಲಿ ಒಂದಾದ ಮಂಡ್ಯ ಜಿಲ್ಲೆಯ ನಿಮಿಷಾಂಭ ದೇಗುಲದಲ್ಲಿ ಇಂದು ಮುಂಜಾನೆ ಸೈನಿಕರಿಗಾಗಿ ದೇವಿಗೆ ಮೊದಲ ಪೂಜೆ ಸಲ್ಲಿಕೆ ಮಾಡಲಾಗಿದೆ. ದೇವಸ್ಥಾನದ ಮುಖ್ಯ ಅರ್ಚಕರು ಸೈನಿಕರಿಗಾಗಿ ಸಂಕಲ್ಪ ಮಾಡಿ ಪೂಜೆ ಸಲ್ಲಿಸಿದ್ದಾರೆ.