ಉತ್ತರಕಾಶಿ ಬಳಿ ಹೆಲಿಕಾಪ್ಟರ್ ಪತನ: 5 ಮಂದಿ ಸಾವು – ಇಬ್ಬರಿಗೆ ಗಾಯ

0
Spread the love

ಡೆಹ್ರಾಡೂನ್‌: ಉತ್ತರಾಖಂಡದ ಉತ್ತರಕಾಶಿ ಬಳಿ ಹೆಲಿಕಾಪ್ಟರ್ ಅಪಘಾತ ಸಂಭವಿಸಿ ಐವರು ಸಾವಿಗೀಡಾಗಿದ್ದಾರೆ. 7 ಮಂದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನವಾಗಿ ಐದು ಮಂದಿ ಮೃತಪಟ್ಟಿದ್ದರೆ, ಇನ್ನಿಬ್ಬರು ಗಾಯಗೊಂಡಿದ್ದಾರೆ.

Advertisement

ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಬಳಿಕ ಪೊಲೀಸರು, ಸೇನಾ ಸಿಬ್ಬಂದಿ, ವಿಪತ್ತು ನಿರ್ವಹಣಾ QRT ತಂಡ, 108 ಆಂಬ್ಯುಲೆನ್ಸ್, ಭಟ್ವಾರಿಯ ಬಿಡಿಒ, ಕಂದಾಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಧಾವಿಸಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ, ಖಾಸಗಿ ಹೆಲಿಕಾಪ್ಟರ್‌ನಲ್ಲಿ 7 ಮಂದಿ ಪ್ರಯಾಣಿಸುತ್ತಿದ್ದರು. ಈ ಪೈಕಿ ಇಬ್ಬರು ಗಾಯಗೊಂಡಿದ್ದು, ಉಳಿದವರು ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನ ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಗರ್ವಾಲ್ ವಿಭಾಗೀಯ ಆಯುಕ್ತ ವಿನಯ್ ಶಂಕರ್ ಪಾಂಡೆ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here