ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ಸ್ಟುಡೆಂಟ್ಸ್ಎಜುಕೇಶನ್ ಸಂಸ್ಥೆಯ ಸನ್ಮಾರ್ಗ ಪದವಿಪೂರ್ವ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ದ್ವಿತೀಯ ಪಿ.ಯು ವಾಣಿಜ್ಯ ವಿಭಾಗದ ಸನಾ ನರೇಗಲ್ ಪ್ರಸಕ್ತ ಸಾಲಿನ ದ್ವಿತೀಯ ಪಿ.ಯು ಪರೀಕ್ಷೆಯಲ್ಲಿ ಶೇ. 98.33 ಅಂಕಗಳನ್ನು ಪಡೆದು ರಾಜ್ಯಕ್ಕೆ 10ನೇ ರ‍್ಯಾಂಕ್ ಹಾಗೂ ಗದಗ ಜಿಲ್ಲೆಗೆ ದ್ವಿತೀಯ ರ‍್ಯಾಂಕನ್ನು ಗಳಿಸಿ ಕಾಲೇಜಿನ ಕೀರ್ತಿ ಹೆಚ್ಚಿಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯ ಸ್ವಗೃಹದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ಪ್ರೊ. ಸೈಯ್ಯದ್ ಮತೀನ್ ಮುಲ್ಲಾ, ಪ್ರೊ. ಉಡುಪಿ ದೇಶಪಾಂಡೆ, ಪ್ರಾಚಾರ್ಯರಾದ ಪ್ರೊ. ಪ್ರೇಮಾನಂದ ರೋಣದ ಹಾಗೂ ವಾಣಿಜ್ಯ ವಿಭಾಗದ ಪ್ರೊ. ಪರಶುರಾಮ ಕೊಟ್ನಿಕಲ್, ಪ್ರೊ. ಶಿವಕುಮಾರ ವಜ್ರಬಂಡಿ, ಪ್ರೊ. ಸಂಗೀತಾ ಬೀಳಗಿ ಸನ್ಮಾನಿಸಿದರು.
ಸಂಸ್ಥೆಯ ಚೇರಮನ್ ಪ್ರೊ. ರಾಜೇಶ ಕುಲಕರ್ಣಿ, ಆಡಳಿತ ಮಂಡಳಿಯ ಸದಸ್ಯರಾದ ಪ್ರೊ. ರೋಹಿತ ಒಡೆಯರ್ ಹಾಗೂ ರಾಹುಲ್ ಒಡೆಯರ್, ಆಡಳಿತಾಧಿಕಾರಿಗಳಾದ ಎಂ.ಸಿ. ಹಿರೇಮಠ ಹಾಗೂ ಕಾಲೇಜಿನ ಸಮಸ್ತ ಬೋಧಕ-ಬೋಧಕೇತರ ಸಿಬ್ಬಂದಿಗಳು ಸಾಧಕ ವಿದ್ಯಾರ್ಥಿನಿಗೆ ಅಭಿನಂದನೆ ತಿಳಿಸಿದ್ದಾರೆ.