ಭಾರತೀಯ ಸೇನಾ ಕಾರ್ಯಕ್ಕೆ ನಮನ

0
Spread the love

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ಆಪರೇಷನ್ ಸಿಂಧೂರ್ ಘೋಷಣೆಯಡಿ ಭಯೋತ್ಪಾದನೆಯ ವಿರುದ್ಧ ದೃಢ ನಿಲುವು ತೆಗೆದುಕೊಂಡು ಉಗ್ರಗಾಮಿಗಳ ನೆಲೆಗಳ ಮೇಲೆ ದಾಳಿಗೈದ ಭಾರತೀಯ ಸೇನೆಗೆ ಅಂಜುಮನ್ ಇಸ್ಲಾಂ ಕಮಿಟಿ ಮಾಜಿ ಕಾರ್ಯದರ್ಶಿ ದಾವಲಸಾಬ ತಾಳಿಕೋಟಿ ಅಭಿನಂದನೆ ಸಲ್ಲಿಸಿದ್ದಾರೆ.

Advertisement

ಈ ಕುರಿತು ಪ್ರಕಟಣೆ ನೀಡಿರುವ ಅವರು, ಪಹಲ್ಗಾಮ್‌ನಲ್ಲಿ ಅಮಾಯಕ ನಾಗರಿಕರನ್ನು ಕ್ರೂರವಾಗಿ ಹತ್ಯೆಗೈದ ಈ ಘೋರ ಕೃತ್ಯಕ್ಕೆ ಭಾರತೀಯ ಸೇನೆ ಆಪರೇಷನ್ ಸಿಂಧೂರು ಮೂಲಕ ತಕ್ಕ ಪಾಠ ಕಲಿಸಲು ಮುಂದಾಗಿದೆ. ಈ ಕಾರ್ಯಾಚರಣೆಯು ನಮ್ಮ ಸಶಸ್ತ್ರ ಪಡೆಗಳ ಧೈರ್ಯ ಮತ್ತು ದಕ್ಷತೆಗೆ ಸಾಕ್ಷಿಯಾಗಿದೆ. ಧಾರ್ಮಿಕ ಭಯೋತ್ಪಾದನೆ, ಕೋಮುವಾದ ಮತ್ತು ನಮ್ಮ ರಾಷ್ಟ್ರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುವ ವಿಭಜಕ ಶಕ್ತಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂಬ ಸ್ಪಷ್ಟ ಸಂದೇಶವನ್ನು ನೀಡಿದೆ.

ತ್ಯಾಗ ಮತ್ತು ಪ್ರತಿರೋಧದ ಪರಂಪರೆಯೊಂದಿಗೆ, ನಮ್ಮ ದೇಶದ ಏಕತೆಯನ್ನು ಮುರಿಯುಲು ಪ್ರಯತ್ನಿಸುವ ಶಕ್ತಿಗಳಿಗೆ ತಕ್ಕ ಉತ್ತರ ನೀಡಿದೆ ಎಂದು ಅವರು ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here