ಗಡಿಯಲ್ಲಿ ಉದ್ವಿಗ್ನ: ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ

0
Spread the love

ಬೆಂಗಳೂರು:ಪಹಲ್ಗಾಮ್ ಉಗ್ರರ ದಾಳಿಗೆ ಭಾರತೀಯ ಸೇನೆಯಿಂದ ಆಪರೇಷನ್ ಸಿಂದೂರ್ ಮೂಲಕ ಪ್ರತ್ಯುತ್ತರ ನೀಡಿದೆ. ಸದ್ಯ ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಯುದ್ಧದ ಭೀತಿ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲು,

Advertisement

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ನಾಗರೀಕರ ರಕ್ಷಣಾ ಕಾರ್ಯಚಟುವಟಿಕೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಹಿರಿಯ ಪೋಲಿಸ್ ಅಧಿಕಾರಿಗಳು , ಎಲ್ಲಾ ಮಹಾನಗರಗಳ ಆಯುಕ್ತರು, ಜಿಲ್ಲಾಧಿಕಾರಿಗಳು , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ  ಮಾಹಿತಿ ಪಡೆಯುತ್ತಿದ್ದಾರೆ.

ಗೃಹ ಸಚಿವರಾದ. ಡಾ ಜಿ ಪರಮೇಶ್ವರ್, ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ ಖರ್ಗೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರಾದ ರೇವಣ್ಣ, ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್ , ನಗರ ಪೊಲೀಸ್ ಆಯುಕ್ತರಾದ ದಯಾನಂದ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here