ವಾಷಿಂಗ್ಟನ್: ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಭಾರತದ ಸೇನೆ ಆಪರೇಷನ್ ಸಿಂಧೂರ್ ನಡೆಸುತ್ತಿದೆ. ಪಾಕಿಸ್ತಾನ ಡ್ರೋಣ್ ದಾಳಿಗೆ ಯತ್ನಿಸಿದ ಪ್ರತಿಕ್ರಿಯೆಯಾಗಿ, ಭಾರತೀಯ ಸೇನೆಯು ಭಯೋತ್ಪಾದಕರು ಇರುವ ನೆಲೆಗಳ ಮೇಲೆ ದಾಳಿ ನಡೆಸಿದೆ. ಇದರ ಬೆನ್ನಲ್ಲೇ ಭಾರತ ಹಾಗೂ ಪಾಕಿಸ್ತಾನ ಎರಡೂ ರಾಷ್ಟ್ರಗಳು ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಈ ಕುರಿತು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಯುನೈಟೆಡ್ ಸ್ಟೇಟ್ಸ್ ಮಧ್ಯಸ್ಥಿಕೆಯಲ್ಲಿ ನಡೆದ ದೀರ್ಘ ರಾತ್ರಿಯ ಮಾತುಕತೆಯ ಬಳಿಕ, ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳು ಸಂಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿರುವುದನ್ನು ಘೋಷಿಸಲು ನನಗೆ ಸಂತೋಷವಾಗಿದೆ.
ಸಾಮಾನ್ಯ ಬುದ್ಧಿಯನ್ನು ಮತ್ತು ಉನ್ನತ ಬುದ್ಧಿವಂತಿಕೆಯನ್ನು ಬಳಸಿದ ಎರಡೂ ದೇಶಗಳಿಗೆ ಅಭಿನಂದನೆಗಳು. ಈ ವಿಷಯದಲ್ಲಿ ನಿಮ್ಮ ಗಮನಕ್ಕೆ ಧನ್ಯವಾದಗಳು! ಎಂದು ಹೇಳಿದ್ದಾರೆ.