ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯುತ್ತಿರುವ ಸಂಘರ್ಷಕ್ಕೆ ಇದೀಗ ಪೂರ್ಣ ಪ್ರಮಾಣದ ಕದನ ವಿರಾಮ ಏರ್ಪಟ್ಟಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಮಾಡಿದ್ದಾರೆ. ಇದರ ನಡುವೆ ಭಾರತ-ಪಾಕಿಸ್ತಾನ ನಡುವಿನ ಉದ್ವಿಗ್ನತೆಗೆ ಸಂಬಂಧಿಸಿದಂತೆ ಭಾರತ ವಿದೇಶಾಂಗ ಕಾರ್ಯದರ್ಶಿ ಮಾದ್ಯಮಕ್ಕೆ ವಿಕ್ರಮ್ ಮಿಶ್ರಿ ಪ್ರತಿಕ್ರಿಯೆ ನೀಡಿದ್ದು,
Advertisement
ಭಾರತ-ಪಾಕ್ ನಡುವೆ ಕದನ ವಿರಾಮ ಒಪ್ಪಂದವಾಗಿದ್ದು, ಇಂದು ಸಂಜೆ 5 ಗಂಟೆಯಿಂದ ಸೇನಾ ಕಾರ್ಯಾಚರಣೆ ಸ್ಥಗಿತ ಮಾಡಲಾಗಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಹೇಳಿದ್ದಾರೆ. ಮಾತ್ರವಲ್ಲ ಈ ಕುರಿತು ಹೆಚ್ಚಿನ ಮಾಹಿತಿಯನ್ನು ಮೇ 12 ರಂದು ನೀಡಲಾಗುವುದು ಎಂದು ಕೂಡ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.