ಕ್ರಿಕೆಟ್‌ ಅಭಿಮಾನಿಗಳಿಗೆ ಗುಡ್‌ ನ್ಯೂಸ್:‌ ಮುಂದಿನ ವಾರದಿಂದ ಮತ್ತೆ IPL ಪಂದ್ಯಗಳು ಆರಂಭ?

0
Spread the love

ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯಿಂದಾಗಿ 2025 ರ ಐಪಿಎಲ್ ಅನ್ನು ಒಂದು ವಾರ ಮುಂದೂಡಲಾಗಿತ್ತು. ಆದರೀಗ ಉಭಯ ದೇಶಗಳ ನಡುವೆ ಕದನ ವಿರಾಮ ಘೋಷಣೆಯಾಗಿರುವುದರಿಂದ ಐಪಿಎಲ್ ದ್ವಿತೀಯಾರ್ಧ ಮುಂದಿನ ವಾರದಿಂದ ಆರಂಭವಾಗುವ ಸಾಧ್ಯತೆಗಳಿದೆ. ಹೌದು ಭಾರತ ಹಾಗೂ ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಕಡಿಮೆಯಾಗುತ್ತಿರುವ ಹಿನ್ನಲೆ ಮತ್ತೆ IPL ಪಂದ್ಯಗಳ ಆರಂಭಕ್ಕೆ ತೀರ್ಮಾನಿಸಲಾಗಿದೆ ಎಂದು ವರದಿಯಾಗಿದೆ.

Advertisement

ಮೇ 25 ರಿಂದ 30ರೊಳಗೆ IPL ಟೂರ್ನಿ ಮುಗಿಸಲು BCCI ನಿರ್ಧರಿಸಿದೆ. ಮುಂದಿನ ಟೂರ್ನಿಗಳಿಗೆ ಸಮಯ ಹೊಂದಿಸಲು ಸಮಸ್ಯೆಯಾಗುತ್ತಿದೆ. ಇದೇ ಕಾರಣಕ್ಕೆ ಈ ತೀರ್ಮಾನಕ್ಕೆ ಬರಲಾಗಿದೆ. ಭಾರತ ಮತ್ತು ಪಾಕ್‌ ನಡುವಿನ ಪ್ರತೀಕಾರ ಸಮರ ಜೋರಾಗುತ್ತಿದ್ದಂತೆ ಭದ್ರತಾ ಕಾರಣಗಳಿಂದ IPL ಟೂರ್ನಿಯನ್ನು ಬಿಸಿಸಿಐ ಒಂದು ವಾರಗಳ ಕಾಲ ಸ್ಥಗಿತಗೊಳಿಸಿತ್ತು. ಪ್ರಸ್ತುತ ಗುರುವಾರ ಸ್ಥಗಿತಗೊಂಡ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯ ಸೇರಿ 58 ಪಂದ್ಯಗಳು ನಡೆದಿವೆ. ಇನ್ನೂ ನಾಲ್ಕು ಪ್ಲೇ ಆಫ್ಸ್ ಪಂದ್ಯಗಳೂ ಸೇರಿ 16 ಪಂದ್ಯಗಳು ಬಾಕಿ ಇವೆ.

ಆಟಗಾರರು ಮತ್ತು ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಿ ಪಂದ್ಯಗಳನ್ನು ಸ್ಥಗಿತಗೊಳಿಸಲಾಗಿತ್ತು. ಉದ್ವಿಗ್ನತೆ ಶಮನವಾದ ಬಳಿಕ ಹೊಸ ದಿನಾಂಕಗಳನ್ನು ಬಿಸಿಸಿಐ ಪ್ರಕಟಿಸಲಿದೆ ಎಂದು ವರದಿಯಾಗಿದೆ. ದಕ್ಷಿಣ ಭಾರತದ ನಗರಗಳಾದ ಬೆಂಗಳೂರು, ಚೆನ್ನೈ ಮತ್ತು ಹೈದರಾಬಾದ್ ನಲ್ಲಿ ಐಪಿಎಲ್ ಪಂದ್ಯಾವಳಿ ಮುಂದುವರಿಸಲು ಯೋಜನೆ ರೂಪಿಸಲಾಗುತ್ತಿದೆ. ಒಂದು ವೇಳೆ ಕೇಂದ್ರ ಸರ್ಕಾರ ಈ ಯೋಜನೆ ಸಮ್ಮತಿ ನೀಡಿದರೆ ಐಪಿಎಲ್ ಇನ್ನು ಕೆಲವೇ ದಿನಗಳಲ್ಲಿ ಪುನರಾರಂಭ ಆಗಲಿದೆ.


Spread the love

LEAVE A REPLY

Please enter your comment!
Please enter your name here