ಕದನ ವಿರಾಮ ಘೋಷಣೆ: ಸಂಸತ್ ವಿಶೇಷ ಅಧಿವೇಶನ ಕರೆಯುವಂತೆ ಪ್ರಧಾನಿಗೆ ರಾಹುಲ್, ಖರ್ಗೆ ಪತ್ರ.!

0
Spread the love

ನವದೆಹಲಿ: ಏಪ್ರಿಲ್ 22ರಂದು ಉಗ್ರರು ಪಹಲ್ಗಾಮ್ ನಲ್ಲಿ ಅಮಾಯಕರ ಮೇಲೆ ದಾಳಿ ನಡೆಸಿ 26 ಮಂದಿಯನ್ನು ಹತ್ಯೆ ಮಾಡಿತ್ತು, ಇದಕ್ಕೆ ಪ್ರತೀಕಾರವಾಗಿ ಭಾರತವು ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪಾಕಿಸ್ತಾನದ ಮೇಲೆ ಪ್ರತಿದಾಳಿ ನಡೆಸಿತ್ತು. ಇದಾದ ಬಳಿಕ ನಿರಂತರವಾಗಿ ದಾಳಿ ಪ್ರತಿದಾಳಿಗಳು ನಡೆಯುತ್ತಿವೆ. ಅಮೆರಿಕದ ಮಧ್ಯಸ್ಥಿಕೆಯಲ್ಲಿ ಎರಡೂ ದೇಶಗಳು ಕದನ ವಿರಾಮ ಘೋಷಿಸಿವೆ.

Advertisement

ಇನ್ನೂ ಇದಕ್ಕೆ ಸಂಬಂಧ ಪಟ್ಟಂತೆ ಪ್ರಧಾನಿ ಮೋದಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಪತ್ರ ಬರೆದಿದ್ದಾರೆ. ಆಪರೇಷನ್ ಸಿಂಧೂರ ಮತ್ತು ಕದನ ವಿರಾಮದ ಬಗ್ಗೆ ಚರ್ಚಿಸಲು ಸಂಸತ್ತಿನ ವಿಶೇಷ ಅಧಿವೇಶನ ಕರೆಯುವಂತೆ ಒತ್ತಾಯಿಸಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಮೊದಲು ಕದನ ವಿರಾಮವನ್ನು ಘೋಷಿಸಿದರು ಎಂದು ಪ್ರಶ್ನಿಸಿದ್ದಾರೆ.

ಪತ್ರದಲ್ಲೇನಿದೆ?
ಆತ್ಮೀಯ ಪ್ರಧಾನ ಮಂತ್ರಿಯವರೇ, ಸಂಸತ್ತಿನ ವಿಶೇಷ ಅಧಿವೇಶನವನ್ನು ತಕ್ಷಣವೇ ಕರೆಯಬೇಕೆಂಬ ವಿರೋಧ ಪಕ್ಷದ ಸರ್ವಾನುಮತದ ವಿನಂತಿಯನ್ನು ನಾನು ಪುನರುಚ್ಚರಿಸುತ್ತೇನೆ. ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆಯಿತು. ಪ್ರತೀಕಾರವಾಗಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಯಿತು. ಆದರೆ, ಇಂದಿನ ಕದನ ವಿರಾಮವನ್ನು ಅಮೆರಿಕ ಅಧ್ಯಕ್ಷ ಟ್ರಂಪ್ ಮೊದಲು ಘೋಷಿಸಿದರು.

ಇದು ಮುಂಬರುವ ಸವಾಲುಗಳನ್ನು ಎದುರಿಸಲು ನಮ್ಮ ಸಾಮೂಹಿಕ ಸಂಕಲ್ಪವನ್ನು ಪ್ರದರ್ಶಿಸಲು ಒಂದು ಅವಕಾಶವಾಗಿದೆ. ನೀವು ಈ ಬೇಡಿಕೆಯನ್ನು ಗಂಭೀರವಾಗಿ ಮತ್ತು ತ್ವರಿತವಾಗಿ ಪರಿಗಣಿಸುತ್ತೀರಿ ಎಂದು ನಾನು ನಂಬುತ್ತೇನೆ ಎಂದು ರಾಹುಲ್‌ ಗಾಂಧಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕಾಂಗ್ರೆಸ್ ಮುಖ್ಯಸ್ಥ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೂಡ ಪ್ರಧಾನಿಗೆ ಪತ್ರ ಬರೆದಿದ್ದಾರೆ. ‘ಪಹಲ್ಗಾಮ್‌ನಲ್ಲಿ ನಡೆದ ಅಮಾನವೀಯ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಸಂಸತ್ತಿನ ಎರಡೂ ಸದನಗಳ ವಿಶೇಷ ಅಧಿವೇಶನವನ್ನು ಕರೆಯಲು ಏಪ್ರಿಲ್ 28 ರಂದು ಬರೆದ ನಮ್ಮ ಪತ್ರಗಳನ್ನು ನೀವು ನೆನಪಿಸಿಕೊಳ್ಳಬೇಕು’ ಎಂದು ತಿಳಿಸಿದ್ದಾರೆ.

ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪಹಲ್ಗಾಮ್ ಭಯೋತ್ಪಾದನೆ, ಆಪರೇಷನ್ ಸಿಂಧೂರ ಮತ್ತು ಮೊದಲು ವಾಷಿಂಗ್ಟನ್ ಡಿಸಿಯಿಂದ, ನಂತರ ಭಾರತ ಮತ್ತು ಪಾಕಿಸ್ತಾನ ಸರ್ಕಾರಗಳಿಂದ ಕದನ ವಿರಾಮ ಘೋಷಣೆಗಳ ಬಗ್ಗೆ ಚರ್ಚಿಸಲು ಸಂಸತ್ತಿನ ವಿಶೇಷ ಅಧಿವೇಶನ ಕರೆಯುವಂತೆ ಎಲ್ಲಾ ವಿರೋಧ ಪಕ್ಷಗಳ ಸರ್ವಾನುಮತದಿಂದ ವಿನಂತಿಸಿವೆ. ಲೋಕಸಭೆಯ ವಿರೋಧ ಪಕ್ಷದ ನಾಯಕರು ಈಗಾಗಲೇ ನಿಮಗೆ ಮತ್ತೊಮ್ಮೆ ಪತ್ರ ಬರೆದಿದ್ದಾರೆ. ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕನಾಗಿ ನಾನು ಈ ವಿನಂತಿಯನ್ನು ಬೆಂಬಲಿಸಿ ಬರೆಯುತ್ತಿದ್ದೇನೆ. ನೀವು ಒಪ್ಪುತ್ತೀರಿ ಎಂದು ನಾನು ನಂಬುತ್ತೇನೆ ಎಂದು ಖರ್ಗೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

 

 


Spread the love

LEAVE A REPLY

Please enter your comment!
Please enter your name here