ಮನೆಗೆಲಸದವರ ಬಗ್ಗೆ ಇರಲಿ ಎಚ್ಚರ: ಉಂಡ ಮನೆಗೆ ಕನ್ನ ಹಾಕಿದ್ದ ಮಹಿಳೆ ಅರೆಸ್ಟ್

0
Spread the love

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ತಾನು ಕೆಲಸ ಮಾಡುತ್ತಿದ್ದ ಮನೆ ಮಾಲೀಕರ ಕಣ್ತಪ್ಪಿಸಿ ಆಭರಣ ಕಳ್ಳತನ ಮಾಡಿ ಸಿಕ್ಕಿಬಿದ್ದರುವ ಘಟನೆ ಗಿರಿನಗರ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಕಮಲಾ(35) ಬಂಧಿತ ಆರೋಪಿಯಾಗಿದ್ದು, ಆರೋಪಿತೆ ಮಹಿಳೆ ಇಟ್ಮಡುವಿನ ಮನೆಯೊಂದರಲ್ಲಿ 3 ತಿಂಗಳ ಹಿಂದೆ ಕೆಲಸಕ್ಕೆ ಸೇರಿದ್ದರು. ಓನರ್ ಮನೆಯಲ್ಲಿ ರಿನೋವೇಷನ್ ಕೆಲಸ ನಡೆಯುತ್ತಿತ್ತು. ಈ ವೇಳೆ ಮನೆಯಿಂದ ನಗದು ಮತ್ತು ಚಿನ್ನಾಭರಣ ಎಗರಿಸಿದ್ದಳು.

ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ಆರೋಪಿಯಿಂದ ಒಟ್ಟು 8.47 ಲಕ್ಷ ಮೌಲ್ಯದ  3.85 ಲಕ್ಷ ನಗದು,48 ಗ್ರಾಂ(4.61ಲಕ್ಷ) ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಈ ಘಟನೆ ಸಂಬಂಧ ಪ್ರಕರಣ ದಾಖಲು ಮಾಡಲಾಗಿದೆ.


Spread the love

LEAVE A REPLY

Please enter your comment!
Please enter your name here