ಬೆಂಗಳೂರು: ಬಿರುಬೇಸಿಗೆಯಲ್ಲೂ ಆಗಾಗ ಮಳೆ ಸುರಿಸುತ್ತಾ ವರುಣ ಬೆಂಗಳೂರು ಸೇರಿದಂತೆ ರಾಜ್ಯಕ್ಕೆ ತಂಪೆರೆಯುತ್ತಿದ್ದಾನೆ. ಕಳೆದ ಎರಡು ದಿನಗಳಿಂದ ಅಲ್ಪಮಟ್ಟಿಗೆ ಬಿಡುವು ನೀಡಿದ್ದ ಮಳೆ ಇಂದು ಮತ್ತೆ ತನ್ನ ಆರ್ಭಟವನ್ನು ಮುಂದುವರೆಸಿದೆ.
Advertisement
ನಗರದಾದ್ಯಂತ ಮೋಡ ಕವಿದ ವಾತಾವರಣವಿದ್ದು, ಔಟರ್ ರಿಂಗ್ ರೋಡ್ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಎಂ.ಜಿ ರೋಡ್, ಚಿನ್ನಸ್ವಾಮಿ ಸ್ಟೇಡಿಯಂ, ವಿಧಾನಸೌಧ, ಕೆ.ಆರ್ ಸರ್ಕಲ್, ಮೆಜೆಸ್ಟಿಕ್, ಕೆ.ಆರ್ ಮಾರ್ಕೆಟ್, ಟೌನ್ ಹಾಲ್ ಸೇರಿದಂತೆ ಹಲವು ಕಡೆ ಮಳೆ ಆರಂಭವಾಗಿದ್ದು,
ವಾಹನ ಸವಾರರು ಪರದಾಡುತ್ತಿದ್ದಾರೆ. ಮುಂದಿನ ಮೂರು ಗಂಟೆಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಯಲ್ಲೋ ಅಲರ್ಟ್ ಘೋಷಿಸಲಾಗಿದೆ.