HomeKarnataka Newsಕರ್ನಾಟಕದಲ್ಲಿ ಮಳೆ ಅವಾಂತರ: 7 ಮಂದಿ ಸಾವು.. ಮನೆಗಳಿಗೆ ನುಗ್ಗಿದ ನೀರು.. ಜನಜೀವನ ಅಸ್ತವ್ಯಸ್ತ!

ಕರ್ನಾಟಕದಲ್ಲಿ ಮಳೆ ಅವಾಂತರ: 7 ಮಂದಿ ಸಾವು.. ಮನೆಗಳಿಗೆ ನುಗ್ಗಿದ ನೀರು.. ಜನಜೀವನ ಅಸ್ತವ್ಯಸ್ತ!

For Dai;y Updates Join Our whatsapp Group

Spread the love

ಬೆಂಗಳೂರು:– ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಕಡೆಗಳಲ್ಲಿ ಮಂಗಳವಾರ ಸಂಜೆ ಸುರಿದ ಭಾರಿ ಮಳೆ ಅವಾಂತರಗಳ ಸರಮಾಲೆಯನ್ನೇ ಸೃಷ್ಟಿಸಿದೆ. ಅಷ್ಟೇ ಅಲ್ಲದೇ ಕೆಲವೆಡೆ ಮಳೆಯ ಆರ್ಭಟಕ್ಕೆ 7 ಜೀವಗಳು ಬಲಿಯಾಗಿವೆ.

ಎಸ್, ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಅವಾಂತರವೇ ಸೃಷ್ಟಿಯಾಗಿತ್ತು. ಹಲವು ಜಿಲ್ಲೆಗಳಲ್ಲಿ ಮಳೆರಾಯನ ಅಬ್ಬರಕ್ಕೆ 7 ಜನ ಸಾವನ್ನಪ್ಪಿದ್ದಾರೆ. ಇನ್ನೂ ಕೆಲವೆಡೆ ಮನೆಗಳಿಗೆ ನೀರು ನುಗ್ಗಿದ್ದು ಅವಾಂತರವೇ ಸೃಷ್ಠಿಯಾಗಿದೆ.

ಎಲ್ಲೆಲ್ಲಿ ಅವಾಂತರ?

ಮೊದಲಿಗೆ ಹುಬ್ಬಳ್ಳಿಯಲ್ಲಿ ನೋಡೋದಾದರೆ…

ಹುಬ್ಬಳ್ಳಿಯಲ್ಲಿ ಸುರಿದ ಧಾರಾಕಾರ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಇಲ್ಲಿನ ಗಣೇಶ ನಗರ, ಆನಂದನಗರದಲ್ಲಿ ಮನೆಗಳಿಗೆ ಭಾರೀ ಪ್ರಮಾಣದ ನೀರು ನುಗ್ಗಿದ್ದರಿಂದ ಜನರು ಪರದಾಡಿದ್ದಾರೆ. ಹುಬ್ಬಳ್ಳಿಯ ಗಬ್ಬೂರಿನ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಮಳೆ ನೀರಿನಲ್ಲಿ ಟೆಂಪೊ ಟ್ರಾವೆಲ್ ವಾಹನ ಮುಳುಗಿತ್ತು.

ಬೆಳಗಾವಿ….

ಬೆಳಗಾವಿಯಲ್ಲಿ ವಿವಿಧ ಬಡಾವಣೆಗಳು ಜಲಾವೃತವಾಗಿದೆ. ನಿರಂತರ ಮಳೆಗೆ ಚರಂಡಿಯಲ್ಲಿ ಕಾಶಪ್ಪ ಶಿರಟ್ಟಿ ಎಂಬಾತ ಕೊಚ್ಚಿ ಹೋಗಿದ್ದಾರೆ. ಧಾರಾಕಾರವಾಗಿ ಸುರಿದ ಮಳೆಯಿಂದ ತುಂಬಿ ಹರಿಯುತ್ತಿರುವ ಚರಂಡಿಗಳಿಂದ ಅವಾಂತರವಾಗಿದೆ. ಜೊತೆಗೆ ಗೋಕಾಕ್ ನಗರದ ರೈಲ್ವೇ ನಿಲ್ದಾಣ ಬಳಿಯೂ ರಸ್ತೆಗಳು ಕೆರೆಯಂತೆ ಹರಿದಿವೆ.

ಗದಗ..

ಗದಗ ಜಿಲ್ಲೆಯ ಹಲವೆಡೆಯೂ ಭಾರೀ ಮಳೆಗೆ ಅವಾಂತರ ಸೃಷ್ಟಿಯಾಗಿದೆ. ಬೆನಕೊಪ್ಪ ಗ್ರಾಮದ ಬಳಿ ಹಳ್ಳದಲ್ಲಿ ಬೈಕ್ ಸಮೇತ ಸವಾರ ಕೊಚ್ಚಿ ಹೋಗಿರುವ ಶಂಕೆ ಇದೆ. ಭಾರೀ ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು ಆತಂಕ ಮೂಡಿಸಿದೆ.

ಕೊಪ್ಪಳ…

ಹಾವೇರಿಯ ರಟ್ಟಿಹಳ್ಳಿ ತಾಲ್ಲೂಕಿನ ಕುಡಪಲಿ ಗ್ರಾಮದಲ್ಲೂ ಸಿಡಿಲು ಬಡಿದು ರೈತ ಸುನೀಲ್ ಕಾಳೇರ್ ಸಾವನ್ನಪ್ಪಿದ್ದಾರೆ. ಇನ್ನೂ ಕೊಪ್ಪಳದಲ್ಲೂ ಕನಕಗಿರಿ ತಾಲೂಕಿನ ಹುಲಿಹೈದರದಲ್ಲಿ ಸಿಡಿಲು ಬಡಿದು ಯಂಕಪ್ಪ ಜಾಡಿ ಎಂಬ ರೈತ ಮೃತಪಟ್ಟಿದ್ದಾರೆ. ಕಾಫಿನಾಡು ಚಿಕ್ಕಮಗಳೂರಿನ ಕಡೂರು ತಾಲೂಕಿನ ಗೆದ್ಲೆಹಳ್ಳಿಯಲ್ಲಿ ಸಿಡಿಲು ಬಡಿದು ಕುರಿಗಾಯಿ ಲೋಕೇಶಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಾಯಚೂರು:

ಜಿಲ್ಲೆಯಲ್ಲಿ ವಿವಿಧೆಡೆ ಗುಡುಗು ಸಹಿತ ಮಳೆ ಆಗಿದೆ. ಸಿಡಿಲು ಬಡಿದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದು ಇಬ್ಬರು ಮಹಿಳೆಯರಿಗೆ ಗಾಯಗಳಾಗಿವೆ. ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮದ ರೈತ ಲಿಂಗಪ್ಪ ಮೃತಪಟ್ಟಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!