ನವದೆಹಲಿ: ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ವಿದೇಶಾಂಗ ಸಚಿವ ಎಸ್ಜೈಶಂಕರ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ವಿದೇಶಾಂಗ ಸಚಿವರಿಗೆ ಸಿಆರ್‌ಪಿಎಫ್ ಕಮಾಂಡೋಗಳು ಭದ್ರತೆ ಒದಗಿಸುತ್ತಾರೆ. ಇದರಲ್ಲಿ, 33 ಕಮಾಂಡೋಗಳು ಅವರ ಸುತ್ತಮುತ್ತಲಿರುತ್ತಾರೆ. ಅಕ್ಟೋಬರ್ 2023 ರಲ್ಲಿ ಅವರ ಭದ್ರತೆಯನ್ನು Y-ವರ್ಗದಿಂದ Z-ವರ್ಗಕ್ಕೆ ಭದ್ರತೆ ಹೆಚ್ಚಿಸಲಾಗಿತ್ತು.
ಈಗಾಗಲೇ ಇರುವ ಝಡ್ ಭದ್ರತೆ ಜತೆಗೆ ಬುಲೆಟ್ ಪ್ರೂಫ್ ಕಾರು ಕೂಡ ಸರ್ಕಾರ ಒದಗಿಸಲಿದೆ. ದೆಹಲಿಯಲ್ಲಿರುವ ಅವರ ನಿವಾಸದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಹೆಚ್ಚಿಸಲಾಗಿದೆ. ಎಸ್ ಜೈಶಂಕರ್ ಅವರಿಗೆ ಈಗಾಗಲೇ ಗೃಹ ಸಚಿವಾಲಯವು Z ವರ್ಗದ ಭದ್ರತೆಯನ್ನು ಒದಗಿಸಿದೆ.
ವಿದೇಶಾಂಗ ಸಚಿವರಿಗೆ ಇರುವ ಬೆದರಿಕೆಯನ್ನು ನಿರ್ಣಯಿಸಿದ ನಂತರ ಗುಪ್ತಚರ ಬ್ಯೂರೋ (ಐಬಿ) ಭದ್ರತೆಯನ್ನು ಹೆಚ್ಚಿಸುವಂತೆ ಶಿಫಾರಸು ಮಾಡಿತ್ತು. ಆ ಸಮಯದಲ್ಲಿ ಕೇಂದ್ರ ಸಚಿವ ಜೈಶಂಕರ್ ಅವರ ಮನೆಯಲ್ಲಿ ಭದ್ರತೆಗಾಗಿ 12 ಸಶಸ್ತ್ರ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಆರು ಮಂದಿ ವೈಯಕ್ತಿಕ ಭದ್ರತಾ ಅಧಿಕಾರಿಗಳೂ (ಪಿಎಸ್‌ಒ) ಇದ್ದರು. ಮೂರು ಪಾಳಿಗಳಲ್ಲಿ 12 ಸಶಸ್ತ್ರ ಬೆಂಗಾವಲು ಕಮಾಂಡೋಗಳನ್ನು ನಿಯೋಜಿಸಲಾಗಿತ್ತು.



