ಗದಗ:- ಜಿಲ್ಲೆಯಲ್ಲಿ ಮಂಗಳವಾರ ಸುರಿದ ಭಾರೀ ಮಳೆಗೆ ಹಳ್ಳದಲ್ಲಿ ಬೈಕ್ ಸಮೇತ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹ ಕೊನೆಗೂ ಪತ್ತೆಯಾಗಿದೆ. ಹಿರೇಕೊಪ್ಪ ಗ್ರಾಮದ ನಿವಾಸಿ 39 ವರ್ಷದ ಶರಣಪ್ಪ ಹಡಗಲಿ ಸಾವನ್ನಪ್ಪಿರುವ ವ್ಯಕ್ತಿ. ಇದೀಗ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆಗಿದ್ದೇನು?
ಗದಗ ಜಿಲ್ಲೆಯ ಹಲವೆಡೆ ಮಂಗಳವಾರ ಭಾರಿ ಮಳೆ ಸುರಿದಿದ್ದು, ಚರಂಡಿಗಳೆಲ್ಲಾ ತುಂಬಿ ಹರಿಯುತ್ತಿತ್ತು. ಈ ವೇಳೆ ಜಾಸ್ತಿ ನೀರು ಇದ್ದ ಕಾರಣ ಹಳ್ಳ ನೋಡದೇ ಬೈಕ್ ಚಲಾಯಿಸಿದ ಸವಾರ ನೀರಲ್ಲಿ ಕೊಚ್ಚಿ ಹೋಗಿದ್ದ. ಗದಗ ತಾಲೂಕಿನ ಬೆನಕೊಪ್ಪ ಗ್ರಾಮದ ಹಳ್ಳದಲ್ಲಿ ಈ ಘಟನೆ ಜರುಗಿತ್ತು. ಪತ್ನಿಯ ತವರು ಮನೆ ಬೆನಕೊಪ್ಪಕ್ಕೆ ಶರಣಪ್ಪ ಹಡಗಲಿ ಅವರು ಹೊರಟ್ಟಿದ್ದ ವೇಳೆ ಈ ದುರಂತ ಸಂಭವಿಸಿದೆ.
ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ:
ಇನ್ನೂ ಘಟನೆ ಸಂಬಂಧ ಮಾಹಿತಿ ಆಧರಿಸಿ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಕೊನೆಗೂ ಮೃತದೇಹ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೂ ಮುತ್ತಪ್ಪನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಘಟನೆ ಸಂಬಂಧ ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.