ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕದ ಇತಿಹಾಸ, ಧರ್ಮ, ಸಾಹಿತ್ಯ, ವಾಸ್ತುಕಲೆ, ಶಿಲ್ಪಕಲೆ, ಶಾಸನ, ಸಂಸ್ಕೃತಿ ಮುಂತಾದ ಕ್ಷೇತ್ರಗಳಲ್ಲಿ ಸಂಶೋಧನೆ, ಅಧ್ಯಯನ, ಪ್ರಕಟಣೆಯಲ್ಲಿ ತೊಡಗಿರುವ ಹುಲಕೋಟಿಯ ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಇತಿಹಾಸ ಪ್ರಾಧ್ಯಾಪಕರಾದ ಡಾ. ಅಪ್ಪಣ್ಣ ಹಂಜೆ ರಾಜ್ಯಮಟ್ಟದ ‘ಸಾಹಿತ್ಯ ಸಿರಿ’ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಳಸ ಶ್ರೀ 1008 ಭಗವಾನ ಚಂದ್ರನಾಥಸ್ವಾಮಿ ಬಸದಿ ಜೀರ್ಣೋದ್ಧಾರ ಸಮಿತಿ ಸಂಯುಕ್ತಾಶ್ರಯದಲ್ಲಿ ಮೇ 18ರಂದು ಕಳಸದ ಕೆಳಂಗಡಿಯಲ್ಲಿರುವ ಶ್ರೀ ಚಂದ್ರನಾಥಸ್ವಾಮಿ ಬಸದಿಯ ಪಂಚಕಲ್ಯಾಣ ಹಾಗೂ ನೂತನ ಬಸದಿಯ ಲೋಕಾರ್ಪಣೆ ಮತ್ತು ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ನಡೆಯಲಿರುವ ರಾಜ್ಯ ಪ್ರಪ್ರಥಮ ಜೈನ ಸಾಹಿತ್ಯ ಸಮ್ಮೇಳನದಲ್ಲಿ ಡಾ. ಅಪ್ಪಣ್ಣ ಹಂಜೆ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸೂರಿ ಶ್ರೀನಿವಾಸ ತಿಳಿಸಿದ್ದಾರೆ.
ಪ್ರಶಸ್ತಿಗೆ ಭಾಜನರಾದ ಡಾ. ಅಪ್ಪಣ್ಣ ಹಂಜೆ ಅವರಿಗೆ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು, ಸದಸ್ಯರು, ಪ್ರಾಚಾರ್ಯರು, ಬೋಧಕ-ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಗದಗ ಜಿಲ್ಲೆಯ ಸಾಹಿತಿಗಳು, ಸಂಶೋಧಕರು, ಗದಗ ಜಿಲ್ಲಾ ದಿಗಂಬರ ಜೈನ ಸಂಘದ ಪದಾಧಿಕಾರಿಗಳು ಅಭಿನಂದಿಸಿ ಶುಭ ಹಾರೈಸಿದ್ದಾರೆ.