ಬಿಗ್ ಬಾಸ್ ಮಾಜಿ ಸ್ಪರ್ಧಿ ಚೈತ್ರಾ ಕುಂದಾಪುರ ಬಗ್ಗೆ ಆಕೆಯ ತಂದೆ ಬಾಲಕೃಷ್ಣ ನಾಯ್ಕ್ ಮಾಡಿದ ಆರೋಪ ದೊಡ್ಡ ಮಟ್ಟದಲ್ಲಿ ಸಂಚಲನ ಸೃಷ್ಟಸಿದೆ. ಇದೀಗ ತಂದೆಯ ಆರೋಪಕ್ಕೆ ತಿರುಗೇಟು ನೀಡಿರುವ ಚೈತ್ರಾ ಎರಡು ಕ್ವಾಟರ್ ಕೊಡಿಸಿದರೆ ಯಾರನ್ನು ಬೇಕಾದರೂ ಒಳ್ಳೆಯವನು ಎನ್ನುತ್ತಾನೆ ಎಂದಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ಚೈತ್ರಾ ಕುಂದಾಪುರ ಅವರು ಶ್ರೀಕಾಂತ್ ಕಶ್ಯಪ್ ಅವರನ್ನು ಮದುವೆಯಾಗಿದ್ದಾರೆ. ಈ ಮದುವೆಗೆ ಚೈತ್ರಾ ತಂದೆ ಬಂದಿರಲಿಲ್ಲ. ತಂದೆ ಸ್ಥಾನದಲ್ಲಿ ನಿಂತು ರಜತ್ ಅವರು ಒಂದಷ್ಟು ಶಾಸ್ತ್ರಗಳನ್ನು ಮಾಡಿದ್ದರು. ಈ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದಿತ್ತು. ಇದೀಗ ಮಗಳ ಬಗ್ಗೆ ಮಾತನಾಡಿರುವ ಬಾಲಕೃಷ್ಣ ನಾಯ್ಕ್ ನನಗೆ ವಿವಾಹಕ್ಕೆ ಆಮಂತ್ರಣವೇ ಇರಲಿಲ್ಲ ಎಂದು ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ.
ಈ ಹೇಳಿಕೆ ಬೆನ್ನಲ್ಲೇ ಚೈತ್ರಾ ಕುಂದಾಪುರ ಅವರು ಇನ್ಸ್ಟಾಗ್ರಾಮ್ನಲ್ಲಿ ಸ್ಟೇಟಸ್ ಒಂದನ್ನು ಹಾಕಿಕೊಂಡಿದ್ದು, ‘ಕುಡುಕ ತಂದೆಯ ಚಿತ್ರ ಹಿಂಸೆ ಅನುಭವಿಸಿದವರಿಗಷ್ಟೇ ಗೊತ್ತು. ಎಂತಹ ಮಕ್ಕಳಿಗೂ ಕುಡುಕ ತಂದೆ ಸಿಗಬಾರದು. ಎರಡು ಕ್ವಾಟರ್ ನಾನು ಕೊಟ್ರೆ ನನ್ನ ಮಕ್ಕಳು ದೇವರು ಅನ್ನುವವರ ಮಾತಿಗೆ ಬೆಲೆ ಕೊಡುವವರು ಮೂರ್ಖರಾಗ್ತಾರೆ’ ಎಂದು ಚೈತ್ರಾ ಬರೆದಿದ್ದಾರೆ.