ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ: ಇಬ್ಬರು ಯುವತಿಯರು ಸಾವು

0
Spread the love

ದಾವಣಗೆರೆ: ಬೈಕ್‌ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವತಿಯರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕಡರನಾಯ್ಕನಹಳ್ಳಿ ಬಳಿ ನಡೆದಿದೆ. ಪಲ್ಲವಿ (26), ಸುಮಾ(26) ಮೃತ ದುರ್ಧೈವಿಗಳಾಗಿದ್ದು,

Advertisement

ಒಂದೇ ಬೈಕ್​ನಲ್ಲಿ ಪಲ್ಲವಿ, ಸುಮಾ ಹಾಗೂ ಸಚಿನ್ ಬರುವಾಗ ಕಾರು ಡಿಕ್ಕಿ ಹೊಡೆದಿದೆ.‌ ಮೂವರು ಬೈಕ್​ನಿಂದ ಕೆಳಗೆ ಬಿದ್ದಿದ್ದಾರೆ. ಗಂಭೀರ ಗಾಯಗೊಂಡಿದ್ದ ಪಲ್ಲವಿ ಮತ್ತು ಸುಮಾ ಅವರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.‌

ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಸಚಿನ್​ ಅವರನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 


Spread the love

LEAVE A REPLY

Please enter your comment!
Please enter your name here