ಅಪ್ರಾಪ್ತ ಬಾಲಕಿ ಖುಷಿ ಹತ್ಯೆ ಕೇಸ್: ಸಂಸದ ಮಂಜುನಾಥ್ ಹೇಳಿದ್ದೇನು..?

0
Spread the love

ರಾಮನಗರ: ಅನುಮಾನಾಸ್ಪದ ರೀತಿಯಲ್ಲಿ ಬಿಡದಿ ಸಮೀಪ ಅಪ್ರಾಪ್ತ ಬಾಲಕಿ ಖುಷಿ ಎಂಬುವವರ ಕೊಲೆಯಾಗಿದೆ. ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂದು ಆರೋಪ ಕೇಳಿಬಂದಿದ್ದು, ಇನ್ನೂ ಭದ್ರಾಪುರ ಗ್ರಾಮಕ್ಕೆ ಸಂಸದ ಡಾ.ಮಂಜುನಾಥ್ ಭೇಟಿ ನೀಡಿ ಮೃತ ಬಾಲಕಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

Advertisement

ಮೃತ ಬಾಲಕಿ ತಾಯಿಗೆ ಧೈರ್ಯ ತುಂಬಿದ ಸಂಸದರು, ಘಟನೆ ಕುರಿತು ಪೊಲೀಸರಿಂದಲೂ ಮಾಹಿತಿ ಸಂಗ್ರಹಿಸಿದ್ದಾರೆ. ವಿಕಲಚೇತನ ಬಾಲಕಿ ಹತ್ಯೆಗೆ ವಿಷಾದ ವ್ಯಕ್ತಪಡಿಸಿದ ಸಂಸದರು, ಈ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಿದರು.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 14 ವರ್ಷದ ಬಾಲಕಿಯನ್ನ ಹತ್ಯೆ ಮಾಡಿರೋದು ವಿಕೃತಿ. ಯಾವ ಕಾರಣಕ್ಕೆ ಹತ್ಯೆಯಾಗಿದೆ ಎಂಬುದು ಮರಣೋತ್ತರ ವರದಿ ಹಾಗೂ ಎಫ್‌ಎಸ್‌ಎಲ್ ವರದಿಯಲ್ಲಿ ಬಹಿರಂಗವಾಗಬೇಕಿದೆ.

ಈಗಾಗಲೇ ಎರಡು-ಮೂರು ತಂಡಗಳ ರಚನೆ ಮಾಡಿಕೊಂಡು ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಬಾಲಕಿ ಸಾವಿಗೆ ನ್ಯಾಯ ಒದಗಿಸುವ ಕೆಲಸ ಆಗಬೇಕು. ಗ್ರಾಮಕ್ಕೆ ಕೆಲ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಅದನ್ನೂ ಸರಿಪಡಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ತಿಳಿಸಿದರು.


Spread the love

LEAVE A REPLY

Please enter your comment!
Please enter your name here